ರಾಜ್ಯ ಸರ್ಕಾರದಿಂದ ಹುತಾತ್ಮ ಯೋಧ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ. ಚೆಕ್ ಹಸ್ತಾಂತರ

ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಉಗ್ರರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ರಾಜ್ಯದ ಹೆಮ್ಮೆಯ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂಪಾಯಿಗಳ ಚೆಕ್ ಅನ್ನು ಮಂಗಳವಾರ...
ಹುತಾತ್ಮ ಯೋಧ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ. ಚೆಕ್ ಹಸ್ತಾಂತರ
ಹುತಾತ್ಮ ಯೋಧ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ. ಚೆಕ್ ಹಸ್ತಾಂತರ

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಉಗ್ರರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ರಾಜ್ಯದ ಹೆಮ್ಮೆಯ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂಪಾಯಿಗಳ ಚೆಕ್ ಅನ್ನು ಮಂಗಳವಾರ ಹಸ್ತಾಂತರಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುತಾತ್ಮ ಯೋಧನ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ ಪರಿಹಾರ ಘೋಷಣೆ ಮಾಡಿದ ಬೆನ್ನಲ್ಲೇ, ಜಿಲ್ಲಾಧಿಕಾರಿ ದಯಾನಂದ್ ಅವರು ಇಂದು ಪ್ರಾಂಜಲ್‌ ಅವರ ನಿವಾಸಕ್ಕೆ ತೆರಳಿ ಕುಟುಂಬದ ಸದಸ್ಯರಿಗೆ 25 ಲಕ್ಷ ರೂಪಾಯಿ ಮೊತ್ತದ ಎರಡು ಚೆಕ್ ಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಸೈನಿಕ‌ ಕಲ್ಯಾಣ ನಿರ್ದೇಶಕರಾದ ಶಶಿಧರ್ ಅವರು ಉಪಸ್ಥಿತರಿದ್ದರು. ಮುಂದಿನ ದಿನಗಳಲ್ಲಿಯೂ ರಾಜ್ಯ ಸರ್ಕಾರ ನಿಮ್ಮ ಕುಟುಂಬದ ಜತೆ ಇರಲಿದೆ ಎಂದು ಭರವಸೆ ನೀಡಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ನಮ್ಮ ಸರ್ಕಾರ ಘೋಷಿಸಿದಂತೆ ಹುತಾತ್ಮ ಯೋಧ "ಕ್ಯಾಪ್ಟನ್ ಎಂ.ವಿ.ಪ್ರಾಂಜಲ್" ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ಅನ್ನು ಹಸ್ತಾಂತರಿಸಲಾಗಿದೆ.

ಪ್ರಾಣವನ್ನು ಪಣಕ್ಕೆ ಇಟ್ಟು ದೇಶ ಕಾಯುವ ಯೋಧರ ಬಗ್ಗೆ ನಮಗೆ ಅಪಾರವಾದ ಗೌರವ-ಅಭಿಮಾನ ಇದೆ. ಅಷ್ಟೇ ಗೌರವ ಮತ್ತು ಕಾಳಜಿ ಯೋಧರ ಕುಟುಂಬ ವರ್ಗದ ಬಗ್ಗೆಯೂ ಇದೆ.

ಯೋಧರ ಸಾವು - ನೋವು ಮುಂದಿಟ್ಟುಕೊಂಡು ರಾಜಕಾರಣ ಮಾಡುವವರು ನಾವಲ್ಲ. ಕೆಲವರು ರಾಜಕೀಯ ದುರುದ್ದೇಶದಿಂದ ಸುಳ್ಳು ಸುದ್ದಿ ಸೃಷ್ಟಿಸಿ ಅಪಪ್ರಚಾರ ಮಾಡುವದರಲ್ಲಿಯೇ ವಿಕೃತ ಆನಂದ ಪಡುತ್ತಿದ್ದಾರೆ. ಅಂತಹವರಿಗೆ ದೇವರು ಸದ್ಬುದ್ಧಿ ನೀಡಲಿ ಎಂದಷ್ಟೇ ಹಾರೈಸಬಲ್ಲೆ ಎಂದು ಪೋಸ್ಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com