ದೇವಸ್ಥಾನ ಪುನರಾಭಿವೃದ್ಧಿ ಯೋಜನೆ ಅನುದಾನ ದುರ್ಬಳಕೆ ಆರೋಪ: ತನಿಖೆಗೆ ಸಚಿವರ ರಾಮಲಿಂಗಾರೆಡ್ಡಿ ಆದೇಶ
ಬೆಳಗಾವಿ: ‘ದೇವಸ್ಥಾನಗಳ ಅಭಿವೃದ್ಧಿ ಮತ್ತು ದುರಸ್ತಿಗೆ ಮುಜರಾಯಿ ಇಲಾಖೆ ಬಿಡುಗಡೆ ಮಾಡಿದ ಅನುದಾನ ದುರ್ಬಳಕೆಯಾಗಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಕುರಿತು ತನಿಖೆ ನಡೆಸಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಸೋಮವಾರ ಹೇಳಿದರು.
ವಿಧಾನಸಭೆಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಜೆಡಿಎಸ್‌ನ ಕರೆಮ್ಮ ಜಿ. ನಾಯಕ ಎತ್ತಿದ್ದ ಪ್ರಶ್ನೆಗೆ ಸಚಿವರು ಉತ್ತರಿಸಿದರು.
‘ದೇವಸ್ಥಾನಗಳ ಅಭಿವೃದ್ಧಿ ಮತ್ತು ದುರಸ್ತಿಗೆ ಬಿಡುಗಡೆ ಮಾಡಿರುವ ಅನುದಾನದ ಬಳಕೆ ಕುರಿತು ಪರಿಶೀಲನೆ ನಡೆಸಲಾಗುವುದು. ಅನುದಾನ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದ ನಿರ್ದಿಷ್ಟ ಪ್ರಕರಣಗಳಿದ್ದರೆ ದೂರು ಸಲ್ಲಿಸಬಹುದು. ಆ ಕುರಿತು ತನಿಖೆ ನಡೆಸುತ್ತೇವೆ’ ಎಂದು ಹೇಳಿದರು.
‘ದೇವದುರ್ಗ ತಾಲ್ಲೂಕಿನ ಹಲವು ದೇವಸ್ಥಾನಗಳ ಅಭಿವೃದ್ಧಿ, ದುರಸ್ತಿಗೆ ಕಳೆದ ವರ್ಷಗಳಲ್ಲಿ ಬಿಡುಗಡೆಯಾಗಿದ್ದ ಅನುದಾನ ದುರ್ಬಳಕೆ ಆಗಿದೆ. ಹಲವೆಡೆ ಕಾಮಗಾರಿಗಳನ್ನು ನಡೆಸದೇ ಬಿಲ್ ಪಾವತಿಸಲಾಗಿದೆ. ಅಧಿಕಾರಿಗಳು ಮತ್ತು ಗುತ್ತಿಗೆದಾರರು ಶಾಮೀಲಾಗಿ ಅಕ್ರಮ ಎಸಗಿದ್ದಾರೆ’ ಎಂದು ದಾಖಲೆಗಳನ್ನು ಪ್ರದರ್ಶಿಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ