‘ಪರಿಷೆಗೆ ಬನ್ನಿ ಕೈ ಚೀಲ ತನ್ನಿ’: ಜನತೆಗೆ ಸಚಿವ ರಾಮಲಿಂಗಾ ರೆಡ್ಡಿ ಮನವಿ

ಬೆಂಗಳೂರಿನ ಐತಿಹಾಸಿ ಬಸವನಗುಡಿ ಕಡಲೆಕಾಯಿ ಡಿ.11ರಿಂದ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ  ಪರಿಷೆಗೆ ಯಾವುದೇ ರೀತಿಯ ಲೋಪ ಆಗದಂತೆ ಪಾರಂಪರಿಕ ಕಡಲೆಕಾಯಿ ಪರಿಷೆಯನ್ನು ‘ಪರಿಷೆಗೆ ಬನ್ನಿ ಕೈ ಚೀಲ ತನ್ನಿ’ ಎಂಬ ಘೋಷಣೆಯೊಂದಿಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮಂಗಳವಾರ ಹೇಳಿದರು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಬೆಂಗಳೂರಿನ ಐತಿಹಾಸಿ ಬಸವನಗುಡಿ ಕಡಲೆಕಾಯಿ ಡಿ.11ರಿಂದ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ  ಪರಿಷೆಗೆ ಯಾವುದೇ ರೀತಿಯ ಲೋಪ ಆಗದಂತೆ ಪಾರಂಪರಿಕ ಕಡಲೆಕಾಯಿ ಪರಿಷೆಯನ್ನು ‘ಪರಿಷೆಗೆ ಬನ್ನಿ ಕೈ ಚೀಲ ತನ್ನಿ’ ಎಂಬ ಘೋಷಣೆಯೊಂದಿಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮಂಗಳವಾರ ಹೇಳಿದರು.

ಮಂಗಳವಾರ ನಗರದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಸಚಿವರು, ಡಿ.11 ಮತ್ತು ಡಿ.12 ಇಲ್ಲಿನ ಬಸವನಗುಡಿಯ ಬುಲ್ ಟೆಂಪಲ್ ರಸ್ತೆಯಲ್ಲಿರುವ ದೊಡ್ಡ ಬಸವಣ್ಣ ದೇವಾಲಯದ ಆವರಣದಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯಲಿದೆ ಎಂದು ಹೇಳಿದರು.

ಇದೇ ವೇಳೆ ಪರಿಷೆ ವೇಳೆ ಸ್ವಚ್ಛತೆ ಉತ್ತೇಜಿಸಲು ಮತ್ತು ಪ್ಲಾಸ್ಟಿಕ್ ಚೀಲಗಳ ಬಳಕೆಯನ್ನು ಕಡಿಮೆ ಮಾಡುವಂತೆ ಜನತೆಗೆ ಮನವಿ ಮಾಡಿದರು.

ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ, ಪ್ಲಾಸ್ಟಿಕ್ ಮುಕ್ತ ಕಡಲೆಕಾಯಿ ಪರಿಷೆ ನಡೆಸಲು ತೀರ್ಮಾನಿಸಲಾಗಿದೆ. ಭದ್ರತಾ ದೃಷ್ಟಿಯಿಂದ ಹೆಚ್ಚು ಪೊಲೀಸ್ ನಿಯೋಜನೆ ಮಾಡಲಾಗುತ್ತಿದೆ. ಸ್ವಚ್ಛತೆ ಕಾಪಾಡುತ್ತಾ ಎಲ್ಲಾ ಬಂದ ಜನಸಾಮಾನ್ಯರಿಗೆ ಯಾವುದೇ ರೀತಿಯ ತೊಂದರೆಗಳಾಗದಂತೆ ಟ್ರಾಫಿಕ್ ಸಮಸ್ಯೆ ಉಂಟಾಗದಂತೆ ಎಲ್ಲಾ ರೀತಿಯ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com