ಖಾಸಗಿ ಸಹಭಾಗಿತ್ವದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗುವುದು: ಸಚಿವ ಎಚ್‌ಕೆ ಪಾಟೀಲ್

ಕರ್ನಾಟಕದಲ್ಲಿ ಸುಮಾರು 25,000 ಮಹತ್ವದ ಸ್ಮಾರಕಗಳಿದ್ದು, ಆದರೆ, ಈ ಸ್ಮಾರಕಗಳನ್ನು ರಕ್ಷಿಸುವಲ್ಲಿ ರಾಜ್ಯವು ಸವಾಲುಗಳನ್ನು ಎದುರಿಸುತ್ತಿದೆ. ಹೀಗಾಗಿ, ಖಾಸಗಿ ಸಹಭಾಗಿತ್ವದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಎಚ್‌ಕೆ ಪಾಟೀಲ್ ಮಂಗಳವಾರ ತಿಳಿಸಿದರು. 
ಸದನದಲ್ಲಿ ಉತ್ತರಿಸಿದ ಪ್ರವಾಸೋದ್ಯಮ ಸಚಿವ ಎಚ್‌ಕೆ ಪಾಟೀಲ್
ಸದನದಲ್ಲಿ ಉತ್ತರಿಸಿದ ಪ್ರವಾಸೋದ್ಯಮ ಸಚಿವ ಎಚ್‌ಕೆ ಪಾಟೀಲ್

ಬೆಳಗಾವಿ: ಕರ್ನಾಟಕದಲ್ಲಿ ಸುಮಾರು 25,000 ಮಹತ್ವದ ಸ್ಮಾರಕಗಳಿದ್ದು, ಆದರೆ, ಈ ಸ್ಮಾರಕಗಳನ್ನು ರಕ್ಷಿಸುವಲ್ಲಿ ರಾಜ್ಯವು ಸವಾಲುಗಳನ್ನು ಎದುರಿಸುತ್ತಿದೆ. ಹೀಗಾಗಿ, ಖಾಸಗಿ ಸಹಭಾಗಿತ್ವದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಎಚ್‌ಕೆ ಪಾಟೀಲ್ ಮಂಗಳವಾರ ತಿಳಿಸಿದರು. 

ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕರ ಪ್ರಶ್ನೆಗಳಿಗೆ ಸಚಿವರು ಉತ್ತರಿಸಿದರು.

'ರಾಜ್ಯದಲ್ಲಿ ಸುಮಾರು 25,000 ಪ್ರಮುಖ ಸ್ಮಾರಕಗಳಿವೆ, ಅವುಗಳನ್ನು ರಕ್ಷಿಸಲು ನಮಗೆ ಅಡೆತಡೆಗಳು ಎದುರಾಗುತ್ತಿವೆ. ಆದ್ದರಿಂದ ನಾವು ಖಾಸಗಿ ವಲಯವನ್ನು ಆಕರ್ಷಿಸಲು ಮತ್ತು ಮೂಲಭೂತ ಸೌಕರ್ಯಗಳನ್ನು ಸೃಷ್ಟಿಸುವ ಮೂಲಕ ಅದರ ಲಾಭವನ್ನು ಪಡೆದುಕೊಳ್ಳಲು ಬಯಸುತ್ತೇವೆ' ಎಂದು ಪಾಟೀಲ್ ಹೇಳಿದರು.

ಖಾಸಗಿ ಹೂಡಿಕೆಯನ್ನು ಆಕರ್ಷಿಸಲು ಮತ್ತು ವ್ಯಾಪಾರ-ಸ್ನೇಹಿ ವಾತಾವರಣವನ್ನು ಸೃಷ್ಟಿಸಲು ಪ್ರವಾಸೋದ್ಯಮ ಇಲಾಖೆಯು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. 26 ಕ್ಷೇತ್ರಗಳಲ್ಲಿ ಖಾಸಗಿ ಹೂಡಿಕೆದಾರರನ್ನು ಆಕರ್ಷಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದರು.

ಸಾಹಸ, ಕೃಷಿ, ಮನರಂಜನೆ, ಕ್ಯಾರವಾನ್, ಸಂಸ್ಕೃತಿ, ಸಾಂಸ್ಕೃತಿಕ ಗ್ರಾಮ, ಪರಿಸರ, ಪರಂಪರೆ, ಹೋಮ್‌ಸ್ಟೇ, ಹೋಟೆಲ್, ಹೌಸ್‌ಬೋಟ್, ಮ್ಯೂಸಿಯಂ ಮತ್ತು ಗ್ಯಾಲರಿ ಕ್ಷೇತ್ರಗಳಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಕಾರ್ಯಕ್ರಮಗಳನ್ನು ಸಚಿವರು ಉಲ್ಲೇಖಿಸಿದರು. ಪ್ರವಾಸಿ ತಾಣಗಳಲ್ಲಿ ಮೂಲ ಸೌಕರ್ಯ ಕಲ್ಪಿಸುವ ಜತೆಗೆ ಸ್ಮಾರಕಗಳ ನಿರ್ವಹಣೆ ಮತ್ತು ಸಂರಕ್ಷಣೆಯ ಜವಾಬ್ದಾರಿಯನ್ನು ತೆಗೆದುಕೊಳ್ಳುವ ಯೋಜನೆ ಜಾರಿಯಲ್ಲಿದೆ ಎಂದರು.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಸಾಹಸ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶವಿದೆ ಮತ್ತು ಅದರಲ್ಲಿ ಆಸಕ್ತಿ ಇದೆ ಎಂದು ಅವರು ಹೇಳಿದರು.

ಯಲ್ಲಮ್ಮನಗುಡ್ಡ, ಮಧುಗಿರಿ, ಅಂಜನಾದ್ರಿ, ನಂದಿಬೆಟ್ಟ, ಗಗನಚುಕ್ಕಿಯಲ್ಲಿ ಕೇಬಲ್‌ ಕಾರ್‌ ಆರಂಭಿಸಲು ತಾಂತ್ರಿಕ ಮತ್ತು ಆರ್ಥಿಕ ಸದೃಢತೆಯೊಂದಿಗೆ ತಪಾಸಣಾ ಕಾರ್ಯ ನಡೆಯುತ್ತಿದ್ದು, ವರದಿ ಬಂದ ನಂತರ ಕಾಮಗಾರಿ ಆರಂಭಿಸಬಹುದು ಎಂದು ಮಳವಳ್ಳಿ ಶಾಸಕ ಪಿಎಂ ನರೇಂದ್ರಸ್ವಾಮಿ ಅವರ ಪ್ರಶ್ನೆಗೆ ಪಾಟೀಲ್ ಪ್ರತಿಕ್ರಿಯಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com