
ಸಿಂಧನೂರು(ರಾಯಚೂರು): ಜಿಲ್ಲೆಯ ತಾಲೂಕು ಕೇಂದ್ರವಾದ ಸಿಂಧನೂರು ಬಳಿ ಗುರುವಾರ ಲಾರಿಗೆ ಮಿನಿ ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರಲ್ಲಿ ಮಿನಿ ಟ್ರಕ್ ಚಾಲಕ ಕೂಡ ಸೇರಿದ್ದಾರೆ. ಮೃತರು ಅದೇ ಗ್ರಾಮದವರಾಗಿದ್ದು, ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಹೋಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.
ಗಾಯಗೊಂಡ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳದಿಂದ ಪರಾರಿಯಾಗಿರುವ ಲಾರಿ ಚಾಲಕನನ್ನು ಗುರುತಿಸಲಾಗಿದ್ದು, ಆತನ ಬಂಧನಕ್ಕೆ ಪ್ರಯತ್ನ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement