ಸಾಂದರ್ಭಿಕ ಚಿತ್ರ
ರಾಜ್ಯ
ಮಂಗಳೂರು: ಇಬ್ಬರು ಡ್ರಗ್ಸ್ ಪೆಡ್ಲರ್‌ಗಳ ಬಂಧನ, 14 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ
ಉಳ್ಳಾಲದ ಪೆರ್ಮನ್ನೂರಿನಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮಂಗಳೂರು: ಉಳ್ಳಾಲದ ಪೆರ್ಮನ್ನೂರಿನಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಂಧಿತರನ್ನು ಶಿಶಿರ್ ದೇವಾಡಿಗ ಮತ್ತು ಎಲ್ ಶುಶನ್ ಎಂದು ಗುರುತಿಸಲಾಗಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.
ಆರೋಪಿಗಳನ್ನು ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ. ಅವರ ಬಳಿಯಿದ್ದ 132 ಗ್ರಾಂ ಮೆಥಾಂಫೆಟಮೈನ್, 250 ಎಲ್‌ಎಸ್‌ಡಿ ಸ್ಟ್ಯಾಂಪ್ ಡ್ರಗ್ ಮತ್ತು 3.70 ಲಕ್ಷ ರೂ. ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ಸುಮಾರು 14 ಲಕ್ಷ ರೂ. ಎನ್ನಲಾಗಿದೆ.


