ಕೇಂದ್ರದ ನೆರವು ಕಡಿತಗೊಂಡಿದ್ದು, ರಾಜ್ಯದ ಮೇಲೆ ಆರ್ಥಿಕ ಒತ್ತಡ ಹೆಚ್ಚಾಗಿದೆ: ಸಚಿವ ಕೃಷ್ಣ ಬೈರೇಗೌಡ

ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿದ್ದ ಆರ್ಥಿಕ ನೆರವು ಕಡಿತಗೊಂಡಿದ್ದು, ಇದರ ಪರಿಣಾಮ ಸರ್ಕಾರದ ಮೇಲೆ ಆರ್ಥಿಕ ಒತ್ತಡ ಹೆಚ್ಚಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಗುರುವಾರ ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಗುರುವಾರ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯುತ್ತಿರುವುದು.
ಬೆಳಗಾವಿಯ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಗುರುವಾರ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯುತ್ತಿರುವುದು.

ಬೆಳಗಾವಿ: ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿದ್ದ ಆರ್ಥಿಕ ನೆರವು ಕಡಿತಗೊಂಡಿದ್ದು, ಇದರ ಪರಿಣಾಮ ಸರ್ಕಾರದ ಮೇಲೆ ಆರ್ಥಿಕ ಒತ್ತಡ ಹೆಚ್ಚಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಗುರವಾರ ಹೇಳಿದರು.

ವಿಧಾನಪರಿಷತ್ ನಲ್ಲಿ ಕಾಂಗ್ರೆಸ್‌ ಸದಸ್ಯ ಯು.ಬಿ.ವೆಂಕಟೇಶ್‌ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 2017-18ರಲ್ಲಿ ರಾಜ್ಯದ ಬಜೆಟ್‌ ಗಾತ್ರ 1.86 ಲಕ್ಷ ಕೋಟಿ ಇದ್ದ ವೇಳೆ ರಾಜ್ಯಕ್ಕೆ ಕೇಂದ್ರದಿಂದ ತೆರಿಗೆ ಪಾಲು ಹಾಗೂ ಕೇಂದ್ರ ಪುರಸ್ಕೃತ ಯೋಜನೆಯಡಿ ಒಟ್ಟು 43,369 ಕೋಟಿ ರು. (ಶೇ. 23.3) ಬಂದಿತ್ತು. ಆದರೆ, ಈಗ ರಾಜ್ಯದ ಬಜೆಟ್‌ ಗಾತ್ರ 3.27 ಲಕ್ಷ ಕೋಟಿ ಇದ್ದರೂ ಕೇಂದ್ರದಿಂದ ಬರುವ ಮೊತ್ತ ಶೇ.17ಕ್ಕೆ ಇಳಿದಿದೆ. ಶೇ.23ರಂತೆ ಲೆಕ್ಕ ಹಾಕಿದರೆ 76 ಸಾವಿರ ಕೋಟಿ ಬರುವ ಬದಲು 56 ಸಾವಿರ ಕೋಟಿ ಬರುತ್ತಿದೆ, ಅದೇ ರೀತಿ ಜಿಎಸ್‌ಟಿ ಪರಿಹಾರ ಸಹ 20 ಸಾವಿರ ಕೋಟಿ ರು. ಕಡಿಮೆಯಾಗಿದೆ. ಹೀಗಾಗಿ ಒಟ್ಟಾರೆ ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾದ ಮೊತ್ತ 40 ಸಾವಿರ ಕೋಟಿ ರು. ಕಡಿಮೆಯಾಗಿದೆ. ಇದರ ಪರಿಣಾಮ ನಮ್ಮ ಆರ್ಥಿಕ ಸಂಪನ್ಮೂಲಗಳ ಮೂಲಕ ಕ್ರೋಢಿಕರಣ ಮಾಡುವ ಒತ್ತಡ ಹೆಚ್ಚಾಗಿದೆ ಎಂದು ಹೇಳಿದರು.

ಕೇಂದ್ರ ಪುರಸ್ಕೃತ ಕೆಲವು ಯೋಜನೆಗಳಿಗೆ ಕೇಂದ್ರದಿಂದ ಅನುದಾನ ಇನ್ನೂ ಬಂದಿಲ್ಲ. ಬರಬಹುದೆಂಬ ನಿರೀಕ್ಷೆಯಿದೆ. 14 ಮತ್ತು 15ನೇ ಹಣಕಾಸು ಆಯೋಗ ಶಿಫಾರಸು ಮಾಡಿದ ಒಟ್ಟು ರೂ.11,495 ಕೋಟಿ ಮತ್ತು ಜಿಎಸ್‌ಟಿ ಪರಿಹಾರದ ಬಾಕಿ ಮೊತ್ತ ಬರಬೇಕಿದೆ. ನಮ್ಮ ರಾಜ್ಯದ ಬಜೆಟ್ ಗಾತ್ರ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ. ನಾವು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವ ತೆರಿಗೆ ಪಾಲು ಹೆಚ್ಚಳವಾಗಿದೆ. ಆದರೆ, ಬಜೆಟ್ ಗಾತ್ರಕ್ಕೆ ಹೋಲಿಸಿದರೆ, ಕೇಂದ್ರದಿಂದ ಬರುವ ಅನುದಾನ ಕಡಿಮೆಯಾಗಿದೆ. ಇದರಿಂದ ನಮ್ಮ ಸಂಪನ್ಮೂಲ ಕ್ರೋಡೀಕರಣಕ್ಕೆ ಹೆಚ್ಚಿನ ಹೊಡೆತ ಬಿದ್ದಿದೆ’ ಎಂದು ತಿಳಿಸಿದರು.

ಇದಲ್ಲದೆ, 2022 ರಿಂದ ರಾಜ್ಯಕ್ಕೆ ಜಿಎಸ್‌ಟಿ ಪರಿಹಾರವಾಗಿ ಕೇಂದ್ರದಿಂದ 1,141 ಕೋಟಿ ರೂಪಾಯಿಗಳು ಬರಬೇಕಿದೆ.  ರಾಜ್ಯಕ್ಕೆ ಬರಬೇಕಿರುವ ರೂ. 2,333 ಕೋಟಿಗಳಲ್ಲಿ ಕೇಂದ್ರವು ಕೇವಲ 1,191 ಕೋಟಿ ರೂಪಾಯಿಗಳನ್ನು ರಾಜ್ಯಕ್ಕೆ ನೀಡಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು, ಕೇಂದ್ರ ಹಣಕಾಸು ಸಚಿವೆ ನಿರಾಮಲಾ ಸೀತಾರಾಮನ್ ಅವರಿಗೆ ಆಗಸ್ಟ್ 10 ರಂದು ಪತ್ರ ಬರೆದಿದ್ದಾರೆ. ತಮ್ಮ ಯೋಜನೆಗಳಿಗೆ ಕೇಂದ್ರವು ರೂ 10,337 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ. ಆದರೆ ಸಾಮಾಜಿಕ ಭದ್ರತಾ ಯೋಜನೆಗಳಿಗೆ ಯಾವುದೇ ಹಣವನ್ನು ಬಿಡುಗಡೆ ಮಾಡುತ್ತಿಲ್ಲ. ಒಟ್ಟಾರೆಯಾಗಿ, ನಮಗೆ ಬರಬೇಕಾದ ಅನುದಾನವನ್ನು ನಾವು ಪಡೆದುಕೊಂಡರೆ, ನಾವು ರಾಜ್ಯದ ಆರ್ಥಿಕ ಸಮಸ್ಯೆಯನ್ನು ಕಡಿಮೆ ಮಾಡಬಹುದು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com