ಹುಬ್ಬಳ್ಳಿ: ಪತ್ನಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದು ಪತಿ ಆತ್ಮಹತ್ಯೆಗೆ ಶರಣು!

ಪತ್ನಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಪತಿ ನಂತರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಹುಬ್ಬಳ್ಳಿ: ಪತ್ನಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಪತಿ ನಂತರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. 

ಹುಬ್ಬಳ್ಳಿಯ ಕಟಕರ ಓಣಿಯಲ್ಲಿ ಈ ಘಟನೆ ನಡೆದಿದ್ದು ಮಹಿಳೆ ಶಾಹಿಸ್ತಾಬಾನು ಬೇಪಾರಿ ಹತ್ಯೆಯಾದ ಗೃಹಿಣಿಯಾಗಿದ್ದಾಳೆ. ಇನ್ನು ಪತಿ ಮಲೀಕ್ ಬೇಪಾರಿ ಪತ್ನಿಯನ್ನು ಹತ್ಯೆ ಮಾಡಿದ ನಂತರ ಪತ್ನಿಯ ಸೀರೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. 

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಕಸಬಾಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸದ್ಯ ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com