ಆರುವರೆ ತಿಂಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗಾಗಿ ರೂ.73,928 ಕೋಟಿ ವೆಚ್ಚ: ಸಿಎಂ ಸಿದ್ದರಾಮಯ್ಯ

ಅಧಿಕಾರಕ್ಕೆ ಬಂದ ಆರುವರೆ ತಿಂಗಳುಗಳ ಆಡಳಿತಾವಧಿಯಲ್ಲಿ ರೂ.73,928 ಕೋಟಿ ಅನುದಾನವನ್ನು ಅಭಿವೃದ್ಧಿ ಕಾರ್ಯಗಳಿಗಾಗಿ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಅಧಿಕಾರಕ್ಕೆ ಬಂದ ಆರುವರೆ ತಿಂಗಳುಗಳ ಆಡಳಿತಾವಧಿಯಲ್ಲಿ ರೂ.73,928 ಕೋಟಿ ಅನುದಾನವನ್ನು ಅಭಿವೃದ್ಧಿ ಕಾರ್ಯಗಳಿಗಾಗಿ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರಣಿ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ, ಗ್ಯಾರಂಟಿ ಯೋಜನೆಗಳ ಮೂಲಕ ಜನರ ಜೀವನ ಮಟ್ಟ ಸುಧಾರಣೆ ಮತ್ತು ರಾಜ್ಯದ ಅಭಿವೃದ್ಧಿ ಕಾರ್ಯಗಳೆರಡನ್ನೂ ಸಮಾನವಾಗಿ ಮುನ್ನಡೆಸುವ ಮೂಲಕ "ಕರ್ನಾಟಕ ಮಾದರಿ ಆಡಳಿತ"ವೆಂಬ ಹೊಸ ಕಲ್ಪನೆಗೆ ನಾಂದಿಯಾಗಿರುವುದಾಗಿ ಹೇಳಿದ್ದಾರೆ. 

 ಹುಬ್ಬಳ್ಳಿಯಲ್ಲಿ ನಡೆದ ಹೂಡಿಕೆದಾರರ ಸಮಾವೇಶದಲ್ಲಿ 16 ಕಂಪನಿಗಳೊಂದಿಗೆ ₹ 1,275 ಕೋಟಿ ಬಂಡವಾಳ ಹೂಡಿಕೆಯ ವಿವಿಧ ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ.ʻಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಮಾದರಿಯಲ್ಲೇ ಕಾರ್ಮಿಕ ಸಾರಿಗೆ ವಲಯವನ್ನು ಸ್ಥಾಪಿಸಲಾಗುವುದು. ಚಾಲಕರು, ಕ್ಲೀನರ್‌, ಮೆಕ್ಯಾನಿಕ್‌ಗಳು, ಪಂಕ್ಚರ್‌ ಅಂಗಡಿಗಳಲ್ಲಿ ಕೆಲಸ ಮಾಡುವವರು ಮತ್ತಿತರರು ಇದರ ಲಾಭ ಪಡೆಯಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕೈಗಾರಿಕಾ ನೀತಿಯಡಿ ಸರ್ಕಾರದ ಪ್ರೋತ್ಸಾಹ, ರಿಯಾಯಿತಿ ಪಡೆದಿರುವ ಕೈಗಾರಿಕೆಗಳು 'ಡಿ' ಗ್ರೂಪ್‌ನಲ್ಲಿ ಶೇ 100ರಷ್ಟು ಹಾಗೂ ಒಟ್ಟಾರೆ ಶೇ 70ರಷ್ಟು ಉದ್ಯೋಗಗಳನ್ನು ಕನ್ನಡಿಗರಿಗೆ ನೀಡಬೇಕೆಂಬ ಷರತ್ತು ವಿಧಿಸಲಾಗಿದೆ. ರಾಜ್ಯದ ಎಲ್ಲ ಸ್ಥಳೀಯ ನಗರಾಭಿವೃದ್ಧಿ ಸಂಸ್ಥೆಗಳಲ್ಲಿ ಸ್ವಚ್ಛ ಭಾರತ್‌ ಮಿಷನ್‌ ಅನುಷ್ಠಾನ ಮಾಡಲು ಪ್ರತ್ಯೇಕ ಐಎಎಸ್‌ ಅಧಿಕಾರಿ ನೇಮಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಎಲ್ಲ ಮಹಾನಗರ ಪಾಲಿಕೆಗಳಲ್ಲಿ ಘನತ್ಯಾಜ್ಯ ವಸ್ತುಗಳ ಸಂಗ್ರಹಣೆ, ಸಾಗಣಿಕೆ, ಸಂಸ್ಕರಣೆ ಮತ್ತು ವಿಲೇವಾರಿಗೆ ಅಗತ್ಯವಿರುವ ಯಂತ್ರೋಪಕರಣಗಳನ್ನು ಮತ್ತು ಸಿವಿಎಲ್‌ ಕಾಮಗಾರಿ ಕೈಗೊಳ್ಳಲು ವಿಸ್ತೃತ ಯೋಜನೆಗೆ ಅನುಮತಿ ನೀಡಿದ್ದು 370 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಅಂಕಿಅಂಶ ಸಮೇತ ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com