ರಾಯಚೂರು: ಹಾಸ್ಟೆಲ್ ಊಟ ಸೇವಿಸಿದ ನಂತರ 14 ವಿದ್ಯಾರ್ಥಿಯರು ಅಸ್ವಸ್ಥ

ಹಾಸ್ಟೆಲ್​ನಲ್ಲಿ ಊಟ ಸೇವಿಸಿದ ನಂತರ 14 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಭಾನುವಾರ ನಡೆದಿದೆ.
ಆಸ್ಪತ್ರೆಗೆ ದಾಖಲಾಗಿರುವ ವಿದ್ಯಾರ್ಥಿನಿಯರು
ಆಸ್ಪತ್ರೆಗೆ ದಾಖಲಾಗಿರುವ ವಿದ್ಯಾರ್ಥಿನಿಯರು

ರಾಯಚೂರು: ಹಾಸ್ಟೆಲ್​ನಲ್ಲಿ ಊಟ ಸೇವಿಸಿದ ನಂತರ 14 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಭಾನುವಾರ ನಡೆದಿದೆ.

ಅಸ್ವಸ್ಥಗೊಂಡಿರುವ ಮೆಟ್ರಿಕ್ ಪೂರ್ವ ಹಾಸ್ಟೆಲ್ ನ ವಿದ್ಯಾರ್ಥಿನಿಯರನ್ನು ಮಾನ್ವಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವಿದ್ಯಾರ್ಥಿನಿ ಪರಿಸ್ಥಿತಿ ಗಂಭೀರವಾಗಿದ್ದು, ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಮಧ್ಯಾಹ್ನ ಪಲಾವ್ ಸೇವಿಸಿದ್ದ ವಿದ್ಯಾರ್ಥಿನಿಯರಿಗೆ ಸಂಜೆ ಏಕಾಏಕಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಹೀಗಾಗಿ ಅಸ್ವಸ್ಥಗೊಂಡ 14 ವಿದ್ಯಾರ್ಥಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದರೂ ವಾರ್ಡನ್ ಹಾಸ್ಟೆಲ್​ಗೆ ಆಗಮಿಸದೇ ನಿರ್ಲಕ್ಷ್ಯ ತೋರಿದ್ದಾರೆ ಎಂದು ವಾರ್ಡನ್ ಪಾರ್ವತಿ ವಿರುದ್ಧ ವಿದ್ಯಾರ್ಥಿನಿಯರು ಆಕ್ರೋಶ ಹೊರಹಾಕಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com