2022ರಲ್ಲಿ ಮಹಿಳೆಯರ ಮೇಲೆ ಆಸಿಡ್ ದಾಳಿ: ಬೆಂಗಳೂರಿಗೆ ಅಗ್ರಸ್ಥಾನ- NCRB ವರದಿ

2022ರಲ್ಲಿ ನಡೆದ ಮಹಿಳೆಯರ ಮೇಲಿನ ಆ್ಯಸಿಡ್ ದಾಳಿಯಲ್ಲಿ ಬೆಂಗಳೂರಿನಲ್ಲಿ ದೇಶದಲ್ಲಿಯೇ  ಅತಿ ಹೆಚ್ಚು ಪ್ರಕರಣ ದಾಖಲಾಗುವುದರೊಂದಿಗೆ ಮೊದಲ ಸ್ಥಾನದಲ್ಲಿದೆ. ನಗರ ಪೊಲೀಸರು ಆರು ಪ್ರಕರಣ ದಾಖಲಿಸಿರುವುದಾಗಿರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಬಿಡುಗಡೆ ಮಾಡಿರುವ ಇತ್ತೀಚಿನ ವರದಿ ತಿಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: 2022ರಲ್ಲಿ ನಡೆದ ಮಹಿಳೆಯರ ಮೇಲಿನ ಆ್ಯಸಿಡ್ ದಾಳಿಯಲ್ಲಿ ಬೆಂಗಳೂರಿನಲ್ಲಿ ದೇಶದಲ್ಲಿಯೇ  ಅತಿ ಹೆಚ್ಚು ಪ್ರಕರಣ ದಾಖಲಾಗುವುದರೊಂದಿಗೆ ಮೊದಲ ಸ್ಥಾನದಲ್ಲಿದೆ. ನಗರ ಪೊಲೀಸರು ಆರು ಪ್ರಕರಣ ದಾಖಲಿಸಿರುವುದಾಗಿ
ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಬಿಡುಗಡೆ ಮಾಡಿರುವ ಇತ್ತೀಚಿನ ವರದಿ ತಿಳಿಸಿದೆ.

ಎನ್‌ಸಿಆರ್‌ಬಿ ಡೇಟಾದಲ್ಲಿ ಪಟ್ಟಿ ಮಾಡಲಾದ 19 ಮೆಟ್ರೋಪಾಲಿಟನ್ ನಗರಗಳ ಪೈಕಿ, ಕಳೆದ ವರ್ಷ ಎಂಟು ಮಹಿಳೆಯರು ಆಸಿಡ್ ದಾಳಿಗೆ ಬಲಿಯಾಗುವುದರೊಂದಿಗೆ ಬೆಂಗಳೂರು ಒಟ್ಟಾರೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಏಳು ಮಹಿಳೆಯರು ಆಸಿಡ್ ದಾಳಿಗೆ ಬಲಿಯಾಗುವುದರೊಂದಿಗೆ ದೆಹಲಿ ಎರಡನೇ ಸ್ಥಾನದಲ್ಲಿದೆ ಮತ್ತು ಅಹಮದಾಬಾದ್ ನಲ್ಲಿ ಐದು ಪ್ರಕರಣ ವರದಿಯೊಂದಿಗೆ ಮೂರನೇ ಸ್ಥಾನದಲ್ಲಿ  ಎಂದು ಅಂಕಿಅಂಶಗಳು ತೋರಿಸಿವೆ. ರಾಷ್ಟ್ರ ರಾಜಧಾನಿಯಲ್ಲಿ 7 ಆ್ಯಸಿಡ್ ದಾಳಿ ಯತ್ನ  ಪ್ರಕರಣ ನಡೆದಿದ್ದರೆ,  ಬೆಂಗಳೂರಿನಲ್ಲಿ ಅಂತಹ 3 ಪ್ರಕರಣಗಳು ದಾಖಲಾಗಿವೆ.

 ಈ ಮಧ್ಯೆ  ಹೈದರಾಬಾದ್ ಮತ್ತು ಅಹಮದಾಬಾದ್‌ನಂತಹ ಮೆಟ್ರೋಪಾಲಿಟನ್ ನಗರಗಳಲ್ಲಿ ಇಂತಹ ಎರಡು ಪ್ರಕರಣಗಳಾಗಿವೆ.  ಕಳೆದ ವರ್ಷ 24 ವರ್ಷದ MCom ಪದವೀಧರೆ ಯುವತಿ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣ ಬೆಂಗಳೂರನ್ನು ಬೆಚ್ಚಿಬೀಳಿಸಿತ್ತು. ಹಲವು ವರ್ಷಗಳಿಂದ ಮಹಿಳೆಯನ್ನು ಹಿಂಬಾಲಿಸುತ್ತಿದ್ದ ಆರೋಪಿ, ಮದುವೆಯ  ಪ್ರಸ್ತಾವನೆಯನ್ನು ತಿರಸ್ಕರಿಸಿದಾಗ ಆಕೆಯ ಮೇಲೆ ಆ್ಯಸಿಡ್ ಎರಚಿದ್ದ. ಈ ವ್ಯಕ್ತಿಯನ್ನು ಮೇ ತಿಂಗಳಲ್ಲಿ ತಿರುವಣ್ಣಾಮಲೈ ಆಶ್ರಮದಿಂದ ಬಂಧಿಸಲಾಗಿತ್ತು. 

ಅಲ್ಲಿ ಆತ "ಸ್ವಾಮಿ" ವೇಷದಲ್ಲಿ ಅಡಗಿಕೊಂಡಿದ್ದ. ಜೂನ್ 2023 ರಲ್ಲಿ ಸಂತ್ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಯಲ್ಲಿ  ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಲಾಯಿತು. ಇದೇ ರೀತಿಯ ಮತ್ತೊಂದು ಪ್ರಕರಣ ಜೂನ್ 10, 2022 ರಂದು ವರದಿಯಾಗಿತ್ತು. ಇದರಲ್ಲಿ ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ ಮಹಿಳಾ ಸ್ನೇಹಿತೆಯ ಮುಖಕ್ಕೆ ವ್ಯಕ್ತಿಯೊಬ್ಬ ಆಸಿಡ್ ಎರಚಿದ್ದ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com