ಹೊಸಕೋಟೆ: ರಾಡ್‌ನಿಂದ ಹೊಡೆದು ವೃದ್ಧ ದಂಪತಿ ಕೊಲೆ; ಪುತ್ರನ ಬಂಧನ

ರಾಡ್‌ನಿಂದ ಹೊಡೆದು ವೃದ್ಧ ದಂಪತಿಯನ್ನು ಕೊಲೆ ಮಾಡಿರುವ ಅಮಾನವೀಯ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಡ್‌ನಿಂದ ಹೊಡೆದು ವೃದ್ಧ ದಂಪತಿಯನ್ನು ಕೊಲೆ ಮಾಡಿರುವ ಅಮಾನವೀಯ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ನಡೆದಿದೆ.

ಆಸ್ತಿ ವಿಚಾರಕ್ಕೆ ಮಗನೇ ಹೆತ್ತ ತಂದೆ ತಾಯಿನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸೂಲಿಬೆಲೆ ಪೊಲೀಸರು ಮಗ ಹಾಗೂ ಆತನ ಪತ್ನಿಯನ್ನು ವಶಕ್ಕೆ ಪಡೆದಿದ್ದಾರೆ.

ಸೂಲಿಬೆಲೆಯ ರಾಮಕೃಷ್ಣಪ್ಪ(70) ಮತ್ತು ಮುನಿರಾಮಕ್ಕ(65) ಕೊಲೆಯಾದ ದಂಪತಿ. ರಾಡ್‌ನಿಂದ ಹೊಡೆದು ತಂದೆ-ತಾಯಿಯನ್ನು ಕೊಲೆ ಮಾಡಿದ ಆರೋಪ ಕೇಳಿಬಂದಿದ್ದರಿಂದ ಮಗ ನರಸಿಂಹನನ್ನು ಸೂಲಿಬೆಲೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮದುವೆಯಾದ ಬಳಿಕ ತಂದೆ-ತಾಯಿ ಬಿಟ್ಟು ಪ್ರತ್ಯೇಕವಾಗಿ ಮಗ ವಾಸವಾಗಿದ್ದ. ಒಬ್ಬನೇ ಮಗನಾಗಿದ್ದರೂ ತಂದೆ ತಾಯಿಯನ್ನು ಹೊರಗಿಟ್ಟಿದ್ದ. ವೃದ್ಧ ದಂಪತಿ ಹೆಣ್ಣು ಮಕ್ಕಳಿಗೆ ಆಸ್ತಿ ಕೊಡಲು ಮುಂದಾಗಿದ್ದಕ್ಕೆ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com