ಯುವ ನಿಧಿ ಯೋಜನೆಗೆ ಡಿಸೆಂಬರ್ 21 ರಿಂದ ನೋಂದಣಿ ಆರಂಭ: ಸಚಿವ ಡಾ. ಶರಣಪ್ರಕಾಶ ಪಾಟೀಲ

ಕಾಂಗ್ರೆಸ್ ಸರ್ಕಾರದ ಐದನೇ ಖಾತರಿಯಾದ ಯುವ ನಿಧಿ ಯೋಜನೆಯ ನೋಂದಣಿ ಡಿಸೆಂಬರ್ 21 ರಿಂದ ಪ್ರಾರಂಭವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಶನಿವಾರ ತಿಳಿಸಿದರು.
ಡಾ. ಶರಣಪ್ರಕಾಶ ಪಾಟೀಲ್
ಡಾ. ಶರಣಪ್ರಕಾಶ ಪಾಟೀಲ್
Updated on

ಕಲಬುರಗಿ: ಕಾಂಗ್ರೆಸ್ ಸರ್ಕಾರದ ಐದನೇ ಖಾತರಿಯಾದ ಯುವ ನಿಧಿ ಯೋಜನೆಯ ನೋಂದಣಿ ಡಿಸೆಂಬರ್ 21 ರಿಂದ ಪ್ರಾರಂಭವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಶನಿವಾರ ತಿಳಿಸಿದರು.

ಟಿಎನ್ಐಇ ಜೊತೆಗೆ ಮಾತನಾಡಿದ ಅವರು, ಈ ಯೋಜನೆಯನ್ನು ಮುಂದಿನ ತಿಂಗಳು ಪ್ರಾರಂಭಿಸಲಾಗುವುದು. ಯೋಜನೆಗೆ ಚಾಲನೆ ನೀಡುವ ದಿನಾಂಕವನ್ನು ಶೀಘ್ರದಲ್ಲೇ ನಿರ್ಧರಿಸಲಾಗುವುದು. ಯೋಜನೆ ಪ್ರಾರಂಭವಾದ ನಂತರ ಫಲಾನುಭವಿಗಳು ಹಣಕಾಸಿನ ನೆರವು ಪಡೆಯಲು ಪ್ರಾರಂಭಿಸುತ್ತಾರೆ. ಸುಮಾರು ಐದು ಲಕ್ಷ ಯುವಕರು ಈ ಯೋಜನೆಯ ಲಾಭ ಪಡೆಯಲಿದ್ದಾರೆ ಎಂದರು.

ಈ ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3,000 ರೂ., ಡಿಪ್ಲೊಮಾ ಪದವೀಧರರಿಗೆ 1,500 ರೂ. ನೀಡಲಾಗುತ್ತದೆ.

ಅರ್ಜಿದಾರರು ಕರ್ನಾಟಕದ ನಿವಾಸಿಗಳಾಗಿರಬೇಕು

ಪದವಿ ಪಡೆದ ಆರು ತಿಂಗಳ ನಂತರ ಮತ್ತು ಆಗಲೂ ನಿರುದ್ಯೋಗಿಗಳಾಗಿ ಉಳಿದಿರುವವರಿಗೆ ಸರ್ಕಾರ ಆರ್ಥಿಕ ನೆರವು ನೀಡುತ್ತದೆ. ಸರ್ಕಾರ ಎರಡು ವರ್ಷಗಳವರೆಗೆ ಆರ್ಥಿಕ ನೆರವು ನೀಡುತ್ತದೆ ಮತ್ತು ಈ ಅವಧಿಯೊಳಗೆ ಪದವೀಧರರಿಗೆ ಉದ್ಯೋಗ ಸಿಗುವವರೆಗೆ ಮಾತ್ರ ನೆರವನ್ನು ಪಡೆಯಬಹುದಾಗಿದೆ ಎಂದು ಸಚಿವರು ಹೇಳಿದರು.

ಅರ್ಜಿದಾರರು ಕರ್ನಾಟಕದ ನಿವಾಸಿಗಳಾಗಿರಬೇಕು ಮತ್ತು 2022-23 ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದಿರಬೇಕು. ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುವುದು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com