ಬೆಂಗಳೂರು: ಪತ್ನಿಯಿಂದ ದೂರವಾದ ಪತಿ; ತನ್ನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯ ಕೊಲೆ!

ಪತ್ನಿ ತನ್ನನ್ನು ದೂರ ಮಾಡಿದ್ದರಿಂದ ಡಿಪ್ರೆಷನ್‌ಗೆ ಒಳಗಾದ ವ್ಯಕ್ತಿಯೊಬ್ಬ ಆಕೆಯ ಸಂಬಂಧಿ ಮಹಿಳೆಯನ್ನು ಕೊಲೆ ಮಾಡಿದ್ದಾನೆ. ಬೆಂಗಳೂರಿನ ಜೆಜೆ ನಗರದ ನಾಲ್ಕನೆ ಕ್ರಾಸ್‌ನಲ್ಲಿ ಈ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಪತ್ನಿ ತನ್ನನ್ನು ದೂರ ಮಾಡಿದ್ದರಿಂದ ಡಿಪ್ರೆಷನ್‌ಗೆ ಒಳಗಾದ ವ್ಯಕ್ತಿಯೊಬ್ಬ ಆಕೆಯ ಸಂಬಂಧಿ ಮಹಿಳೆಯನ್ನು ಕೊಲೆ ಮಾಡಿದ್ದಾನೆ. ಬೆಂಗಳೂರಿನ ಜೆಜೆ ನಗರದ ನಾಲ್ಕನೆ ಕ್ರಾಸ್‌ನಲ್ಲಿ ಈ ಘಟನೆ ನಡೆದಿದೆ.

ಪರ್ವಿನ್ ತಾಜ್ ಹಲ್ಲೆಗೀಡಾಗಿ ಮೃತಪಟ್ಟ ಮಹಿಳೆ‌. ಮಹಮ್ಮದ್ ಜುನೈದ್ ಎಂಬಾತನಿಂದ ಕೊಲೆ‌ ನಡೆದಿದೆ. ಆರೋಪಿ ಮತ್ತು ಮೃತ ಮಹಿಳೆ ಸಂಬಂಧಿಗಳಾಗಿದ್ದಾರೆ. ಜುನೈದ್ ಹಾಗೂ ಆತನ ಪತ್ನಿ ಜಗಳವಾಡಿಕೊಂಡಿದ್ದರು. ಈ ವಿಚಾರ ಪೊಲೀಸ್ ಠಾಣೆ ಮೆಟ್ಟಿಲೇರಿ ಇಬ್ಬರಿಗೂ ಬುದ್ಧಿವಾದ ಹೇಳಿ ಕಳಿಸಲಾಗಿತ್ತು.

ಇದಾದ ಮೇಲೆ ಜುನೈದ್‌ ಪತ್ನಿಯಿಂದ ದೂರಾಗಿದ್ದ. ಪತ್ನಿ ದೂರವಾದುದರಿಂದ ಮಾನಸಿಕವಾಗಿ ನೊಂದಿದ್ದ. ಈ ವೇಳೆ ಆತ ಪರ್ವಿನ್ ತಾಜ್‌ಗೆ ಹತ್ತಿರವಾಗಿದ್ದ. ಪರ್ವಿನ್ ತಾಜ್ ಆರೋಪಿಯ ಪತ್ನಿಯ ಸಂಬಂಧಿಯಾಗಿದ್ದಳು. ಈಕೆಗೆ ಇಬ್ಬರು ಮಕ್ಕಳಿದ್ದು, ತನ್ನ ಗಂಡನ ಜೊತೆ ಭಿನ್ನಾಬಿಪ್ರಾಯ ಹೊಂದಿದ್ದಳು. ಆದರೆ ಪರ್ವೀನ್ ಇತ್ತೀಚೆಗೆ ಜುನೈದ್ ಜೊತೆ ಮಾತನಾಡುವುದನ್ನು ನಿಲ್ಲಿಸಿದ್ದಳು ಎನ್ನಲಾಗಿದೆ.

ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಜುನೈದ್ ಇತ್ತೀಚೆಗಷ್ಟೇ ತನ್ನ ಸ್ನೇಹಿತರ ಬಳಿ 1 ಲಕ್ಷ ಸಾಲ ಪಡೆದಿದ್ದರಿಂದ ಕೆಲಸ ಬಿಟ್ಟಿದ್ದ. ಜುನೈದ್ ಪರ್ವೀನ್‌ನನ್ನು ಸಂಪರ್ಕಿಸುತ್ತಲೇ ಇದ್ದ, ತನ್ನನ್ನು ಭೇಟಿಯಾಗುವಂತೆ ಕೇಳಿಕೊಂಡಿದ್ದ. ಹೀಗಾಗಿ ಭಾನುವಾರ ಸಂಜೆ 4.30 ರ ಸುಮಾರಿಗೆ ಪತಿ ಮನೆಯಲ್ಲಿ ಇಲ್ಲದಿದ್ದಾಗ ಜುನೈದ್‌ಗೆ ತನ್ನ ಮನೆಗೆ ಬರುವಂತೆ ಪರ್ವೀನ್ ಹೇಳಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಪರ್ವೀನ್ ಭೇಟಿ ಮಾಡಿದ ಜುನೈದ್ ತನ್ನೊಂದಿಗೆ ಸಂಬಂಧ ಮುಂದುವರಿಸಲು ಅವಳನ್ನು ಒತ್ತಾಯಿಸಿದನು. ಆದರೆ ಅವಳು ನಿರಾಕರಿಸಿದ ನಂತರ ಅವನು ಅವಳನ್ನು ಅನೇಕ ಬಾರಿ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಜೆಜೆ ನಗರ ಪೊಲೀಸರು ಬಂಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com