ಉತ್ತರ ಕರ್ನಾಟಕ ಎದುರಿಸುತ್ತಿರುವ ಸಮಸ್ಯೆಗಳ ಚರ್ಚೆಗೆ ಸಿದ್ಧ: ಡಿಸಿಎಂ ಡಿಕೆ ಶಿವಕುಮಾರ್

ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಎದುರಿಸುತ್ತಿರುವ ಸಮಸ್ಯೆಗಳ ಚರ್ಚೆಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್

ಬೆಳಗಾವಿ: ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಎದುರಿಸುತ್ತಿರುವ ಸಮಸ್ಯೆಗಳ ಚರ್ಚೆಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಆಡಳಿತ ಅಥವಾ ವಿರೋಧ ಪಕ್ಷದ ಯಾವುದೇ ಸದಸ್ಯರು ಎತ್ತುವ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಸಿದ್ಧವಿದೆ. ಉತ್ತರ ಕರ್ನಾಟಕದ ಬರ ಪರಿಸ್ಥಿತಿಗೆ ಸಂಬಂಧಿಸಿದ ಚರ್ಚೆಗೆ  ನಮ್ಮ ಸಂಪೂರ್ಣ ಬೆಂಬಲವಿದೆ. ಉತ್ತರ ಕರ್ನಾಟಕ, ಕಿತ್ತೂರು ಕರ್ನಾಟಕ, ಹಳೇ ಮೈಸೂರು ಪ್ರದೇಶ ಇವೆಲ್ಲವೂ ಕರ್ನಾಟಕದ ಅವಿಭಾಜ್ಯ ಅಂಗಗಳಾಗಿದ್ದು, ಅವುಗಳ ಸಮಸ್ಯೆಗಳನ್ನು ಚರ್ಚಿಸಲು ನಾವು ಸದಾ ಮುಕ್ತರಾಗಿದ್ದೇವೆ ಎಂದರು. 

ಬೆಳಗಾವಿ ಜಿಲ್ಲೆ ವಿಭಜನೆಗೆ ಸಂಬಂಧಿಸಿದಂತೆ ಕರೆ ನೀಡಲಾಗಿರುವ ಬಂದ್ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ಸದನದಲ್ಲಿ ಆ ಪ್ರಸ್ತಾಪ  ಮುಂದಿಟ್ಟರೆ ಮಾತ್ರ ಅದರ ಬಗ್ಗೆ ಖಂಡಿತವಾಗಿಯೂ ಯೋಚಿಸುತ್ತೇವೆ ಎಂದರು. ಸಾವರ್ಕರ್  ಭಾವಚಿತ್ರವನ್ನು ಸದನದಿಂದ ತೆಗೆದುಹಾಕುವ ಬಗ್ಗೆ ಅವರ ನಿಲುವಿನ ಬಗ್ಗೆ ಕೇಳಿದ ಪ್ರಶ್ನೆಗೆ, "ಎರಡೂ ಸದನಗಳ ಒಳಗೆ ಇದ್ದದ್ದು ಸ್ಪೀಕರ್ ಮತ್ತು ಅಧ್ಯಕ್ಷರಿಗೆ ಸೇರಿದ್ದು" ಎಂದು ಹೇಳಿದರು.

ಬಿಜೆಪಿ ಸದನದ ಸಮಯವನ್ನು ವ್ಯರ್ಥ ಮಾಡುತ್ತಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ಇತರ ಪಕ್ಷಗಳ ಬಗ್ಗೆ ಮಾತನಾಡಲು ನಾನು ಒಪ್ಪುವುದಿಲ್ಲ ಎಂದು ತಿಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com