ಮಂಡ್ಯ: ಮೂರು ವರ್ಷದ ಪುಟ್ಟ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿ ಬಂಧನ

ಮಂಡ್ಯ ಜಿಲ್ಲೆಯಲ್ಲಿ ಪುಟ್ಟ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ 55 ವರ್ಷದ ವ್ಯಕ್ತಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಆರೋಪಿ ಶಿವಣ್ಣ ಎಂಬಾತ ಮೂರು ವರ್ಷದ ಮಗುವನ್ನು ಪಕ್ಕದ ಮನೆಯಿಂದ ತನ್ನ ಮನೆಗೆ ಕರೆದುಕೊಂಡು ಹೋಗಿದ್ದ ಎನ್ನಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಡ್ಯ: ಜಿಲ್ಲೆಯಲ್ಲಿ ಪುಟ್ಟ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ 55 ವರ್ಷದ ವ್ಯಕ್ತಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಆರೋಪಿ ಶಿವಣ್ಣ ಎಂಬಾತ ಮೂರು ವರ್ಷದ ಮಗುವನ್ನು ಪಕ್ಕದ ಮನೆಯಿಂದ ತನ್ನ ಮನೆಗೆ ಕರೆದುಕೊಂಡು ಹೋಗಿದ್ದ ಎನ್ನಲಾಗಿದೆ.

ಬಾಗಿಲನ್ನು ಲಾಕ್ ಮಾಡಿದ ನಂತರ, ಆತ ಮಗುವಿನ ಬಟ್ಟೆಗಳನ್ನು ಕಳಚಿದ್ದಾನೆ. ಮಗುವಿನ ಕೂಗನ್ನು ಕೇಳಿದ ನೆರೆಹೊರೆಯವರು ಅನುಮಾನಗೊಂಡು ಆರೋಪಿಯ ಮನೆಗೆ ಧಾವಿಸಿದ್ದಾರೆ. ಬಳಿಕ ಬಾಗಿಲು ಒಡೆದು ಮಗುವನ್ನು ರಕ್ಷಿಸಿದ್ದಾರೆ. ಆದರೆ, ಆರೋಪಿ ಹಿಂಬಾಗಿಲ ಮೂಲಕ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾನೆ.

ಈ ಸಂಬಂಧ ಮಗುವಿನ ಪೋಷಕರು ಕೆಆರ್‌ಎಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ನಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com