ನ್ಯುಮೋನಿಯಾ, ಶಿಶು ಮರಣ ತಗ್ಗಿಸಲು ಕ್ರಮ: ತಾಯಂದಿರ ಹಾಲಿನ ಬ್ಯಾಂಕ್ ಕಾರ್ಯಕ್ರಮಕ್ಕೆ ಚಾಲನೆ

ಮಕ್ಕಳಿಗೆ ಸೂಕ್ತವಾದ ಪೌಷ್ಟಿಕಾಂಶವನ್ನು ಖಚಿತಪಡಿಸಿಕೊಳ್ಳಲು ಮತ್ತು ಶಿಶು ಮರಣ ಪ್ರಮಾಣ ತಗ್ಗಿಸುವ ಉದ್ದೇಶದಿಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಸಾಮಾಜಿಕ ಜಾಗೃತಿ ಅಭಿಯಾನ ಹಾಗೂ ತಾಯಂದಿರ ಹಾಲಿನ ಬ್ಯಾಂಕ್ʼ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಿದರು.
ಸಚಿವ ದಿನೇಶ್ ಗುಂಡೂರಾವ್
ಸಚಿವ ದಿನೇಶ್ ಗುಂಡೂರಾವ್

ಬೆಳಗಾವಿ: ಮಕ್ಕಳಿಗೆ ಸೂಕ್ತವಾದ ಪೌಷ್ಟಿಕಾಂಶವನ್ನು ಖಚಿತಪಡಿಸಿಕೊಳ್ಳಲು ಮತ್ತು ಶಿಶು ಮರಣ ಪ್ರಮಾಣ ತಗ್ಗಿಸುವ ಉದ್ದೇಶದಿಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಸಾಮಾಜಿಕ ಜಾಗೃತಿ ಅಭಿಯಾನ ಹಾಗೂ ತಾಯಂದಿರ ಹಾಲಿನ ಬ್ಯಾಂಕ್ʼ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಿದರು.

ನ್ಯುಮೋನಿಯಾ ತೊಲಗಿಸಿ ಆರೋಗ್ಯವಂತ ಬಾಲ್ಯ ಒದಗಿಸಿ’ ಶೀರ್ಷಿಕೆಯಡಿ ಬೆಳಗಾವಿಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಸಚಿವರು ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಾಲುಣಿಸುವಿಕೆಯನ್ನು ಉತ್ತೇಜಿಸುವಲ್ಲಿ ಹಾಲಿನ ಬ್ಯಾಂಕುಗಳು ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ. ಇದು ಮಕ್ಕಳ ಅಕಾಲಿಕ ಮರಣ, ಅನಾರೋಗ್ಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಹೇಳಿದರು. ಅಲ್ಲದೆ, ರಾಜ್ಯದ ಪ್ರತಿ ಕಂದಾಯ ವಿಭಾಗಕ್ಕೆ ಒಂದು ಎಂಬಂತೆ ನವಜಾತ ಶಿಶುಗಳ ಆ್ಯಂಬುಲೆನ್ಸ್ ಗಳನ್ನು ಪರಿಚಯಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ರಂದೀಪ್ ಡಿ, ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್‌ಎಚ್‌ಎಂ) ನಿರ್ದೇಶಕರಾದ ಡಾ. ನವೀನ್ ಭಟ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com