ಹೊಸ ತಾಲ್ಲೂಕು ಕೇಂದ್ರ ಆಸ್ಪತ್ರೆಗಳು ಮೇಲ್ದರ್ಜೆಗೆ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಘೋಷಣೆಯಾಗಿರುವ ಹೊಸ ತಾಲ್ಲೂಕು ಕೇಂದ್ರ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ವಿಧಾನಸಭೆಯಲ್ಲಿಂದು ಹೇಳಿದರು.  
ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್

ಬೆಳಗಾವಿ: ರಾಜ್ಯದಲ್ಲಿ ಘೋಷಣೆಯಾಗಿರುವ ಹೊಸ ತಾಲ್ಲೂಕು ಕೇಂದ್ರ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ವಿಧಾನಸಭೆಯಲ್ಲಿಂದು ಹೇಳಿದರು.  

ಪ್ರಶ್ನೋತ್ತರ ವೇಳೆಯಲ್ಲಿ ಸಚಿವರು, ಹೊಸದಾಗಿ ಘೋಷಣೆಯಾದ ತಾಲ್ಲೂಕು ಕೇಂದ್ರಗಳ ಬಹಳಷ್ಟು ಆಸ್ಪತ್ರೆಗಳು ತಾಲ್ಲೂಕು ಆಸ್ಪತ್ರೆಗಳಾಗಿ ಮೇಲ್ದರ್ಜೆಗೆ ಏರಿಯಾಗಿಲ್ಲ. ಇದರೊಂದಿಗೆ ರಾಜ್ಯದಲ್ಲಿ 160 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಹ ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೆ ಏರುವ ಅರ್ಹತೆ ಹೊಂದಿವೆ. ಶಾಸಕರ ಬೇಡಿಕೆಗಳಿಗೆ ಸ್ಪಂದಿಸಿ ಹಣಕಾಸಿ ಲಭ್ಯತೆ ನೋಡಿಕೊಂಡು ಮೇಲ್ದರ್ಜೆಗೆ ಏರಿಸುವ ಕಾರ್ಯವನ್ನು ಹಂತ ಹಂತವಾಗಿ ಮಾಡಲಾಗುವುದು ಎಂದರು. 

ದೇವದುರ್ಗ ಪಟ್ಟಣದಲ್ಲಿ ತಾಯಿ ಮಕ್ಕಳ ಆಸ್ಪತ್ರೆ: ಶಾಸಕಿ ಕೆ.ಕರೆಮ್ಮ ಅವರ ಮನವಿಗೆ ಸ್ಪಂದಿಸಿದ ಸಚಿವ ದಿನೇಶ್ ಗುಂಡೂರಾವ್, ಮುಂದಿನ ವರ್ಷದ ಆಯವ್ಯಯದಲ್ಲಿ ದೇವದುರ್ಗ ಪಟ್ಟಣದಲ್ಲಿ ಹೊಸದಾಗಿ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಒದಗಿಸುವ ಭರವಸೆ ನೀಡಿದರು. ಇದರೊಂದಿಗೆ ಗಬ್ಬೂರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸುವುದಕ್ಕೂ ಸಮ್ಮತಿಸಿದರು.

ಇದೆ ವೇಳೆ ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ದಿನೇಶ್ ಗುಂಡೂರಾವ್, ಈಗಾಗಲೇ ತೀರ್ಥಹಳ್ಳಿ ಸರ್ಕಾರಿ ಆಯುರ್ವೇದ ಆಸ್ಪತ್ರೆ ನಿರ್ಮಾಣಕ್ಕೆ 35 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ. ಅವಶ್ಯಕತೆಗೆ ಅನುಸಾರವಾಗಿ ಹೆಚ್ಚಿನ ಅನುದಾನವನ್ನು ನೀಡುವುದಾಗಿ ಹೇಳಿದರು.

ತಾಳಿಕೋಟೆ ತಾಲ್ಲೂಕು ಕೇಂದ್ರವಾಗಿ 7 ವರ್ಷಗಳಾಗಿವೆ. ಈಗಲೂ ತಾಳಿಕೋಟೆ ಅಸ್ಪತ್ರೆ ತಾಲ್ಲೂಕು ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೆ ಏರಿಕೆಯಾಗಿಲ್ಲ. ಕೂಡಲೇ ತಾಳಿಕೋಟೆ ನಗರದಲ್ಲಿ 30 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ನಿರ್ಮಿಸುವಂತೆ ಮುದ್ದೇಬಿಹಾಳ ಶಾಸಕ ಸಿ.ಎಸ್. ನಾಡಗೌಡ ಸಚಿವರಲ್ಲಿ ಅವರಲ್ಲಿ ಕೇಳಿದರು. ಇದಕ್ಕೆ ಸ್ಪಂದಿಸಿದ ಸಚಿವ ದಿನೇಶ್ ಗುಂಡೂರಾವ್ ತಾಳಿಕೋಟೆ ಆಸ್ಪತ್ರೆ ಮೇಲ್ದರ್ಜೆಗೆ ಏರಿಸುವ ಭರವಸೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com