ಮಂಗಳೂರು: ಪುತ್ತೂರು ಸಮೀಪದ ಗ್ರಾಮದಲ್ಲಿ ಡಿಆರ್‌ಡಿಒ ಸಿಬ್ಬಂದಿ ಶವವಾಗಿ ಪತ್ತೆ; ಆತ್ಮಹತ್ಯೆ ಶಂಕೆ!

ಡಿಆರ್‌ಡಿಒ ಸಿಬ್ಬಂದಿಯೊಬ್ಬರು ಕಲ್ಲರ್ಪೆ ಗ್ರಾಮದ ಅವರ ನಿವಾಸದಲ್ಲಿ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮಂಗಳೂರು: ಡಿಆರ್‌ಡಿಒ ಸಿಬ್ಬಂದಿಯೊಬ್ಬರು ಕಲ್ಲರ್ಪೆ ಗ್ರಾಮದ ಅವರ ನಿವಾಸದಲ್ಲಿ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಮೃತರನ್ನು ಪುತ್ತೂರು ಸಮೀಪದ ಕಲ್ಲರ್ಪೆ ಗ್ರಾಮದ ನಿವಾಸಿ 24 ವರ್ಷದ ಭರತ್ ಎಂದು ಗುರುತಿಸಲಾಗಿದೆ.

ಬುಧವಾರ ತಡರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಭರತ್ ಅವರು ಎರಡು ತಿಂಗಳ ಹಿಂದಷ್ಟೇ ಡಿಆರ್‌ಡಿಒ ಹೈದರಾಬಾದ್ ಘಟಕಕ್ಕೆ ತಾತ್ಕಾಲಿಕವಾಗಿ ಸೇರ್ಪಡೆಗೊಂಡಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.

ಭರತ್ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ ವಾರದ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮಕ್ಕೆ ವಾಪಸಾಗಿದ್ದರು.

ಆದರೆ, ರಾಜೀನಾಮೆ ಪತ್ರ ಸಲ್ಲಿಸಿದ್ದರೂ, ಅಂಗೀಕಾರಗೊಂಡಿರಲಿಲ್ಲ. ಸಂತ್ರಸ್ತರಿಗೆ ಗುರುವಾರ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಿಂದ (ಡಿಆರ್‌ಡಿಒ) ಕರೆ ಬಂದಿದ್ದು, ಮರುದಿನ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com