ಹಿಂದುಳಿದ ತಾಲೂಕುಗಳ ಪರಿಸ್ಥಿತಿ ಅಧ್ಯಯನಕ್ಕಾಗಿ ಉನ್ನತ ಮಟ್ಟದ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

ಹಿಂದುಳಿದ ತಾಲ್ಲೂಕುಗಳ ಕುರಿತ ನಂಜುಂಡಪ್ಪನವರ ವರದಿಯ ಅನುಷ್ಠಾನ ಹಾಗೂ ಅದರ ಫಲಶ್ರುತಿಯನ್ನು ಅಧ್ಯಯನ ಮಾಡಲು ನುರಿತ ಅರ್ಥಶಾಸ್ತ್ರಜ್ಞರೊಬ್ಬರ  ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Updated on

ಬೆಳಗಾವಿ: ಹಿಂದುಳಿದ ತಾಲ್ಲೂಕುಗಳ ಕುರಿತ ನಂಜುಂಡಪ್ಪನವರ ವರದಿಯ ಅನುಷ್ಠಾನ ಹಾಗೂ ಅದರ ಫಲಶ್ರುತಿಯನ್ನು ಅಧ್ಯಯನ ಮಾಡಲು ನುರಿತ ಅರ್ಥಶಾಸ್ತ್ರಜ್ಞರೊಬ್ಬರ  ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ವಿಧಾನಸಭೆಯಲ್ಲಿಂದು ಉತ್ತರ ಕರ್ನಾಟಕ ಕುರಿತ ಚರ್ಚೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ನಂಜುಂಡಪ್ಪ ವರದಿ ಸಲ್ಲಿಕೆಯಾಗಿ 21 ವರ್ಷಗಳಾಗಿದ್ದು, ಅವರ  ವರದಿಯನ್ನಾಧರಿಸಿ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಇದುವರೆಗೆ 61, 330 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಲಾಗಿದೆ. ಇದರಲ್ಲಿ ಸುಮಾರು 42, 000 ಕೋಟಿ ರೂ. ಖರ್ಚು ಮಾಡಲಾಗಿದೆ.  ನಂಜುಂಡಪ್ಪ ವರದಿಯನ್ನಾಧರಿಸಿ ನೀಡಲಾಗುವ ವಿಶೇಷ ಅಭಿವೃದ್ಧಿ ಯೋಜನೆಯಡಿಯೇ 32, 433.43 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ಇದರ ಜೊತೆಯಲ್ಲಿ ಬಯಲು ಸೀಮೆ ಅಭಿವೃದ್ಧಿ ಮಂಡಳಿ ವತಿಯಿಂದಲೂ ಅನುದಾನಗಳನ್ನು ಒದಗಿಸಲಾಗಿದೆ ಎಂದು ಸದನಕ್ಕೆ ಅಂಕಿಅಂಶ ಸಹಿತಿ ಮಾಹಿತಿ ನೀಡಿದರು. 

ಇಷ್ಟೆಲ್ಲ ಮಾಡಿದರೂ  ಈ ಭಾಗದಲ್ಲಿ ಮಾನವ ಅಭಿವೃದ್ಧಿ ಸೂಚ್ಯಂಕವು ನಿರೀಕ್ಷಿತ ಮಟ್ಟದಲ್ಲಿ ಸುಧಾರಿಸುತ್ತಿಲ್ಲ. ಶಿಕ್ಷಣ, ಆರೋಗ್ಯ, ಆದಾಯಗಳಿಕೆ ಮುಂತಾದವುಗಳಲ್ಲಿ ಹಿನ್ನಡೆಯನ್ನು ಈ ಜಿಲ್ಲೆಗಳು ಅನುಭವಿಸುತ್ತಿವೆ. ಹಾಗಾಗಿ ವಿಶೇಷವಾಗಿ ನಂಜುಂಡಪ್ಪ ಅವರ ವರದಿಯ ಅನುಷ್ಠಾನ ಹಾಗೂ ಅದರ ಫಲಶ್ರುತಿಯನ್ನು ಅಧ್ಯಯನ ಮಾಡಲು ನುರಿತ ಅರ್ಥಶಾಸ್ತ್ರಜ್ಞರ ಅಧ್ಯಕ್ಷತೆಯಲ್ಲಿ ಉನ್ನತಮಟ್ಟದ ಸಮಿತಿ ರಚಿಸಲಾಗುವುದು ಎಂದು ತಿಳಿಸಿದರು. 

 ಉತ್ತರ ಕರ್ನಾಟಕದಲ್ಲಿ ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಆರ್ಥಿಕತೆಗೆ ಉತ್ತೇಜನ ನೀಡಲು ಹಾಗೂ ಸ್ಥಳೀಯರಿಗೆ ಉದ್ಯೋಗ ಒದಗಿಸುವ ಸಲುವಾಗಿ ಬೆಳಗಾವಿ ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ, 500 ಎಕರೆ ಪ್ರದೇಶದಲ್ಲಿ ಫೌಂಡ್ರಿ ಕ್ಲಸ್ಟರ್ ಅನ್ನು ಸ್ಥಾಪಿಸಲಾಗುವುದು ಹಾಗೂ ಜಿಲ್ಲೆಯಲ್ಲಿ ಏರೋಸ್ಪೇಸ್ ಆಧಾರಿತ ಕೈಗಾರಿಕೆಗಳ ಬೆಳವಣಿಗೆಗೆ ವಿಶೇಷ ಒತ್ತು ನೀಡಲಾಗುವುದು ಎಂದರು.

ಧಾರವಾಡ ಜಿಲ್ಲೆಯಲ್ಲಿ ಕೈಗಾರಿಕಾ ಕ್ಲಸ್ಟರ್ ಅನ್ನು ಸ್ಥಾಪಿಸಲಾಗುತ್ತಿದ್ದು, ಈಗಾಗಲೇ 19 ಘಟಕಗಳು ರೂ.1255 ಕೋಟಿ ಬಂಡವಾಳ ಹೂಡಿಕೆ ಮಾಡುತ್ತಿದ್ದು, ಸುಮಾರು 2450 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ. ಅಲ್ಲದೇ, ಧಾರವಾಡದ ಸಮೀಪ ಸುಮಾರು 3000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶವನ್ನು ಸ್ಥಾಪಿಸಲಾಗುತ್ತದ ಎಂದು ತಿಳಿಸಿದರು. 

 ರಾಯಚೂರಿನಲ್ಲಿ ಹತ್ತಿ ಉತ್ಪಾದನೆಯು ಹೆಚ್ಚಿರುವುದರಿಂದ ಈ ಜಿಲ್ಲೆಯಲ್ಲಿ ಆರ್ಥಿಕ ಅಭಿವೃದ್ಧಿ ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ದೃಷ್ಠಿಯಿಂದ ಹತ್ತಿ ಆಧಾರಿತ ಕೈಗಾರಿಕೆಗಳ ಸ್ಥಾಪನೆಗೆ ವಿಶೇಷ ಒತ್ತು ನೀಡಲಾಗುವುದು.
ವಿಜಯಪುರದಲ್ಲಿ ಉತ್ಪಾದನಾ ಕ್ಲಸ್ಟರ್ ಅನ್ನು ಅಂದಾಜು 1500 ಎಕರೆ ಪ್ರದೇಶದಲ್ಲಿ ಸ್ಥಾಪಿಸಲಾಗುವುದು. ಉತ್ತರ ಕರ್ನಾಟಕವು ಸಮೃದ್ಧ ಪ್ರವಾಸೋದ್ಯಮಗಳ ತಾಣವಾಗಿದೆ ಎಂದರು. 

ಧಾರವಾಡದಲ್ಲಿರುವ ವಾಲ್ಮಿ [ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ] ಯನ್ನು ಉನ್ನತೀಕರಿಸಲಾಗುವುದು. ಇದನ್ನು ‘Centre of excellence for water management’ ಅನ್ನಾಗಿ ಬದಲಾಯಿಸಿ ಇದರ ಮೂಲಕ ಜಲ ಶಿಕ್ಷಣ ನೀಡುವುದಷ್ಟೆ ಅಲ್ಲ, ಉತ್ತರ ಕರ್ನಾಟಕದ ಮಣ್ಣಿನ ಸವುಳು- ಜವುಳು ಸಮಸ್ಯೆಯನ್ನು ನಿರ್ವಹಿಸಲಾಗುವುದು. ಹಾಗೂ ರೈತರ ಆದಾಯ ಹೆಚ್ಚಳದ ಕಡೆಗೆ ಒತ್ತು ನೀಡಲಾಗುವುದು ಎಂದು ಮುಖ್ಯಮಂತ್ರಿ ಸದನಕ್ಕೆ ವಿವರಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com