ಶೀತ ಗಾಳಿ ಎಫೆಕ್ಟ್: ಬಿಸಿಲುನಾಡು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳೂ 'ಥಂಡಾ ಥಂಡಾ ಕೂಲ್'!

ಒಂದೆರಡು ದಿನದಿಂದ ರಾಜ್ಯದ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಚಳಿ ಪ್ರಮಾಣ ವಿಪರಿತವಾಗಿ ಏರಿಕೆ ಆಗಿದೆ. ಇನ್ನೂ ಕೆಲವು ದಿವಸಗಳು ಚಳಿ ವಾತಾವರಣ ಹೀಗೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಒಂದೆರಡು ದಿನದಿಂದ ರಾಜ್ಯದ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಚಳಿ ಪ್ರಮಾಣ ವಿಪರಿತವಾಗಿ ಏರಿಕೆ ಆಗಿದೆ. ಇನ್ನೂ ಕೆಲವು ದಿವಸಗಳು ಚಳಿ ವಾತಾವರಣ ಹೀಗೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆ ವರದಿ ಪ್ರಕಾರ, ಕರ್ನಾಟಕದ ದಕ್ಷಿಣ ಒಳನಾಡಿಗಿಂತಲೂ ಉತ್ತರ ಒಳನಾಡಿನಲ್ಲಿ (ಉತ್ತರ ಕರ್ನಾಟಕ) ಚಳಿ ಪ್ರಮಾಣ ಕೆಲವೇ ದಿನಗಳಲ್ಲಿ ಅಧಿಕವಾಗಿದೆ. ಮೂರು ನಾಲ್ಕು ದಿನಗಳಿಂದ ವಿಜಯಪುರ ಜಿಲ್ಲೆ ವ್ಯಾಪ್ತಿಯಲ್ಲಿ ಬಿಸಿಲಿನ ಜಳ ಇದ್ದರೂ ರಾತ್ರಿ ಅತ್ಯಧಿಕ ಚಳಿ ಕಂಡು ಬಂದಿದೆ. ಇಲ್ಲಿ ನಿತ್ಯ ಕನಿಷ್ಠ ತಾಪಮಾನ 12 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆ ಆಗಿದೆ.

ಹೆಚ್ಚು ಬಿಸಿಲು ಕಂಡು ಬರುತ್ತಿದ್ದ ಬಿಸಿಲನಾಡು ಎನ್ನಿಸಿಕೊಳ್ಳುವ ಜಿಲ್ಲೆಗಳಲ್ಲಿಯೇ ಕರಾವಳಿ ಮತ್ತು ದಕ್ಷಿಣದ ಭಾಗದ ಜಿಲ್ಲೆಗಳಿಗಿಂತಲೂ ಅಧಿಕ ಚಳಿ ವರದಿ ಆಗುತ್ತಿದೆ. ರಾಯಚೂರು, ಕೊಪ್ಪಳ, ಬೀದರ್, ಕಲಬುರಗಿ, ಹಾವೇರಿ, ಗದಗ, ಬೆಳಗಾವಿ ವಿಮಾನ ನಿಲ್ದಾಣ, ಧಾರವಾಡ ಬಾಲಕೋಟೆ ಜಿಲ್ಲೆಗಳ ವ್ಯಾಪ್ತಿಯಲ್ಲಿ ಕನಿಷ್ಠ ತಾಪಮಾನ 18-12 ಡಿಗ್ರಿ ಸೆಲ್ಸಿಯಸ್ ವರೆಗೆ ಅತ್ಯಧಿಕ ಪ್ರಮಾಣದಲ್ಲಿ ಇಳಿಕೆ ಆಗುವ ಮೂಲಕ ಇಲ್ಲೆಲ್ಲಾ ಚಳಿ ಸೃಷ್ಟಿಯಾಗಿದೆ.

ಕರ್ನಾಟಕದಲ್ಲಿ ಗುರುವಾರದಿಂದ ಚಳಿ ಆರಂಭವಾಗಿದೆ ಎಂದು ಐಎಂಡಿ ಅಧಿಕಾರಿಗಳು ತಿಳಿಸಿದ್ದು, ಈ ವರ್ಷ ಚಳಿಗಾಲದಲ್ಲಿ  ಹೆಚ್ಚು ಚಳಿ ಇಲ್ಲದಿದ್ದರೂ ಉತ್ತರ ಕರ್ನಾಟಕದಲ್ಲಿ ಕನಿಷ್ಠ ತಾಪಮಾನದಲ್ಲಿ ಭಾರೀ ಇಳಿಕೆಯಾಗಿದೆ,  ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಅದನ್ನು ಅನುಭವಿಸುತ್ತಿವೆ.  ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಳಿಗೆ ಕಾರಣವೆಂದರೆ ಶೀತ ಗಾಳಿಯ  ಪರಿಣಾಮ, ಇದು ಇನ್ನೂ ಕೆಲವು ದಿನಗಳವರೆಗೆ ಮುಂದುವರಿಯುತ್ತದೆ ಎಂದು  ಐಎಂಡಿ-ಬೆಂಗಳೂರು  ವಿಜ್ಞಾನಿ, ಎ ಪ್ರಸಾದ್ ಮಾಹಿತಿ ನೀಡಿದ್ದಾರೆ.

ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಬೆಳಗ್ಗೆ ಮತ್ತು ರಾತ್ರಿ ಕ್ರಮೇಣ ಚಳಿಯ ವಾತಾವರಣ ಕಂಡು ಬರುತ್ತಿದೆ. ಜನರು ಬೆಚ್ಚಗಿನ ಧಿರಿಸಿನ ಮೊರೆ ಹೋಗಿದ್ದಾರೆ. ಸಂಜೆಯಾಗುತ್ತಿದ್ದಂತೆ ಮನೆಯಿಂದ ಹೊರಬರಲು ಯೋಚಿಸುತ್ತಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಶುಷ್ಕ ವಾತಾವರಣ ಹೆಚ್ಚಿತ್ತು. ವಾತಾವರಣದಲ್ಲಿನ ದಿಢೀರ್ ಬದಲಾವಣೆಯಿಂದಾಗಿ ಗರಿಷ್ಠ ತಾಪಮಾನ ಇದ್ದರೂ ಸಹಿತ ಬೆಳಗ್ಗೆ ಮತ್ತು ಸಂಜೆ ಚಳಿ ಹೆಚ್ಚಿರುತ್ತದೆ.

ಗುರುವಾರ ಬೆಂಗಳೂರಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 26.5 ಮತ್ತು 17.7 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಗಾಳಿಯ ವೇಗ ಗಂಟೆಗೆ 25 ಕಿಮೀ, ಸಾಮಾನ್ಯ ವೇಗ ಗಂಟೆಗೆ 20 ಕಿಮೀಗಿಂತ ಕಡಿಮೆ. ಉತ್ತರ ಕರ್ನಾಟಕದ ಭಾಗಗಳಲ್ಲಿ ಕನಿಷ್ಠ ತಾಪಮಾನ ದಾಖಲಾಗಿದೆ.

ವಿಜಯಪುರದಲ್ಲಿ ಗುರುವಾರ 12.6 ಡಿಗ್ರಿ ಸೆಲ್ಸಿಯಸ್, ಬುಧವಾರ 12 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೀದರ್, ವಿಜಯಪುರ, ಯಾದಗಿರಿ ಮತ್ತು ಬಾಗಲಕೋಟೆಯಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆಯಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com