ಕೇರಳದಲ್ಲಿ ಕೋವಿಡ್ ಉಲ್ಬಣ: ಕರ್ನಾಟಕದ ಆಸ್ಪತ್ರೆಗಳಲ್ಲಿ ಪೂರ್ವ ಸಿದ್ಧತೆ ಪರಿಶೀಲನೆ!

ನೆರೆಯ ಕೇರಳದಲ್ಲಿ ಹೊಸ ಕೋವಿಡ್ ಪ್ರಕರಣಗಳು ಬೆಳಕಿಗೆ ಬರುತ್ತಿರುವ ವರದಿಗಳಿಂದ ಎಚ್ಚೆತ್ತಿಕೊಂಡಿರುವ  ಕರ್ನಾಟಕ ಸರ್ಕಾರ ರಾಜ್ಯದಲ್ಲಿನ ಆಸ್ಪತ್ರೆಗಳಲ್ಲಿ ಪೂರ್ವ ಸಿದ್ಧತೆಯನ್ನು ಪರಿಶೀಲಿಸಲು ನಿರ್ಧರಿಸಿದೆ. ಮಂಗಳವಾರ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯನ್ನು ಸರ್ಕಾರ ಕರೆದಿದೆ.
ಅಧಿಕಾರಿಗಳ ಸಭೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಅಧಿಕಾರಿಗಳ ಸಭೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ನೆರೆಯ ಕೇರಳದಲ್ಲಿ ಹೊಸ ಕೋವಿಡ್ ಪ್ರಕರಣಗಳು ಬೆಳಕಿಗೆ ಬರುತ್ತಿರುವ ವರದಿಗಳಿಂದ ಎಚ್ಚೆತ್ತಿಕೊಂಡಿರುವ  ಕರ್ನಾಟಕ ಸರ್ಕಾರ ರಾಜ್ಯದಲ್ಲಿನ ಆಸ್ಪತ್ರೆಗಳಲ್ಲಿ ಪೂರ್ವ ಸಿದ್ಧತೆಯನ್ನು ಪರಿಶೀಲಿಸಲು ನಿರ್ಧರಿಸಿದೆ. ಮಂಗಳವಾರ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯನ್ನು ಸರ್ಕಾರ ಕರೆದಿದೆ.

ಇಂದು ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮದ ಮೂಲಕ ಪರೀಕ್ಷಾ ಕಿಟ್‌ಗಳನ್ನು ಖರೀದಿಸಲು ನಿರ್ದೇಶನಗಳನ್ನು ನೀಡಲಾಗಿದೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಆರ್‌ಟಿ-ಪಿಸಿಆರ್ ಪರೀಕ್ಷೆ, ರಾಪಿಡ್ ಆಂಟಿಜೆನ್ ಪರೀಕ್ಷೆ ಮತ್ತು ವಿಟಿಎಂ (ವೈರಲ್ ಟ್ರಾನ್ಸ್‌ಪೋರ್ಟ್ ಮೀಡಿಯಂ) ಒಳಗೊಂಡಿರುವ ಪರೀಕ್ಷಾ ಕಿಟ್‌ಗಳನ್ನು ಖರೀದಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. 

ಐಸಿಯು ಬೆಡ್‌ಗಳು, ಆಮ್ಲಜನಕದ ಲಭ್ಯತೆ ಮತ್ತು ಔಷಧಗಳು ಸೇರಿದಂತೆ ಹಾಸಿಗೆಗಳ ಸಾಮರ್ಥ್ಯ  ಪರಿಶೀಲಿಸಲು ಎಲ್ಲಾ ಆಸ್ಪತ್ರೆಗಳಲ್ಲಿ ಪೂರ್ವ ಸಿದ್ಧತೆ ಪರಿಶೀಲನೆ ನಡೆಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪರಿಸ್ಥಿತಿ ಆತಂಕಕಾರಿ ಹಾಗಿಲ್ಲದಿದ್ದರೂ ಅಂತಹ ಪರಿಸ್ಥಿತಿ ಮರುಕಳಿಸಿದರೆ ಸನ್ನದ್ಧರಾಗಿರುವಂತೆ,ಯಾವುದೇ ಕೊರತೆಯಿದ್ದಲ್ಲಿ ಅದನ್ನು ಈಗಲೇ ಸರಿಪಡಿಸಬೇಕು ಎಂದು ನಿರ್ದೇಶನ ನೀಡಿರುವುದಾಗಿ ತಿಳಿಸಿದರು.

ಮಂಗಳವಾರ ಕೋವಿಡ್ ಕುರಿತು ತಾಂತ್ರಿಕ ಸಲಹಾ ಸಮಿತಿ ಸಭೆ ಕರೆಯಲಾಗಿದೆ. ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ಕೆ.ರವಿ ಇದರ ಮುಖ್ಯಸ್ಥರಾಗಿದ್ದಾರೆ. ಮತ್ತೆ ಕೋವಿಡ್ ಉಲ್ಬಣಿಸಿದರೆ ಪರಿಸ್ಥಿತಿ ನಿಭಾಯಿಸಲು ಸಿದ್ಧರಾಗಿರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ ಸಚಿವರು, ಈ ಬಾರಿ ಕೋವಿಡ್ ರೋಗಲಕ್ಷಣ ಇರುವವರಿಗೆ ಮಾತ್ರ  ಪರೀಕ್ಷೆ ಮಾಡಲಾಗುವುದು, ಎಲ್ಲರಿಗೂ ಅಲ್ಲ ಎಂದರು. 

ವೈರಸ್ ಮತ್ತು ಅದರ ರೂಪಾಂತರಗಳು ಹೇಗೆ ವರ್ತಿಸುತ್ತಿವೆ ಎಂಬುದನ್ನು ಅಧ್ಯಯನ ಮಾಡುವ ಅಗತ್ಯವನ್ನು ಅವರು ಒತ್ತಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com