ಕರಾವಳಿಯಲ್ಲಿ ರಾಣಿ ಅಬ್ಬಕ್ಕ ಹೆಸರಿನಲ್ಲಿ ಸೈನಿಕ ಶಾಲೆ ಸ್ಥಾಪನೆ: ನಿರ್ಮಲಾ ಸೀತಾರಾಮನ್

2024 ರ ಗಣತಿಯ ನಂತರ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ರಾಣಿ ಅಬ್ಬಕ್ಕ ದೇವಿಯ ಭಾವಚಿತ್ರವಿರುವ ಅಂಚೆಚೀಟಿ ಬಿಡುಗಡೆ
ರಾಣಿ ಅಬ್ಬಕ್ಕ ದೇವಿಯ ಭಾವಚಿತ್ರವಿರುವ ಅಂಚೆಚೀಟಿ ಬಿಡುಗಡೆ

ಮೂಡಬಿದಿರೆ(ದಕ್ಷಿಣ ಕನ್ನಡ): 2024 ರ ಗಣತಿಯ ನಂತರ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಅವರು ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ರಾಣಿ ಅಬ್ಬಕ್ಕ ದೇವಿ ಅವರ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿ ಮಾತನಾಡಿದರು. ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆಯರ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಯಾವಾಗಲೂ ನಂಬಿರುವುದರಿಂದ ಮಹಿಳಾ ಮಸೂದೆ ಸಾಕಾರಗೊಂಡಿದೆ ಎಂದರು.

ಪೋರ್ಚುಗೀಸರ ವಿರುದ್ಧ ಹೋರಾಡಿದ 16 ನೇ ಶತಮಾನದ ಉಳ್ಳಾಲದ ರಾಣಿ ಅಬ್ಬಕ್ಕ ಅವರ ಧೈರ್ಯ ಮತ್ತು ವೀರಾವೇಶವನ್ನು ಶ್ಲಾಘಿಸಿದ ನಿರ್ಮಲಾ ಸೀತಾರಾಮನ್, ಸಾಮ್ರಾಜ್ಯಶಾಹಿ ಶಕ್ತಿಗಳ ವಿರುದ್ಧ ಹೋರಾಡಿದ ಅನೇಕ ಅಜ್ಞಾತ ಹೋರಾಟಗಾರರ ಕೊಡುಗೆಗಳನ್ನು ದಾಖಲಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಹೇಳಿದರು.

ಆಜಾದಿ ಕಾ ಅಮೃತ್ ಮಹೋತ್ಸವದ ಭಾಗವಾಗಿ, ಸರ್ಕಾರವು 14,500 ಕಥೆಗಳೊಂದಿಗೆ ಡಿಜಿಟಲ್ ಜಿಲ್ಲಾ ಭಂಡಾರವನ್ನು ಸಂಗ್ರಹಿಸಿದೆ, ಇದು ಸ್ವಾತಂತ್ರ್ಯ ಹೋರಾಟದೊಂದಿಗೆ ಸಂಬಂಧಿಸಿದ ಸ್ಥಳಗಳನ್ನು ಎತ್ತಿ ತೋರಿಸುತ್ತದೆ ಎಂದರು. 

ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರ ಪಾತ್ರ, ಸಂವಿಧಾನ ಸಭೆಯಲ್ಲಿ ಮಹಿಳೆಯರು ಮತ್ತು ಸ್ವಾತಂತ್ರ್ಯ ಹೋರಾಟದ ಬುಡಕಟ್ಟು ನಾಯಕರ ಮೂರು ಪುಸ್ತಕಗಳನ್ನು ಹೊರತರಲು ಕೇಂದ್ರ ಸಂಸ್ಕೃತಿ ಸಚಿವಾಲಯವು ಅಮರ ಚಿತ್ರ ಕಥಾದೊಂದಿಗೆ ಒಪ್ಪಂದ ಮಾಡಿಕೊಂಡಿದೆ.

ಕರಾವಳಿ ಕರ್ನಾಟಕದಲ್ಲಿ ರಾಣಿ ಅಬ್ಬಕ್ಕನ ಹೆಸರಿನಲ್ಲಿ ಸೈನಿಕ ತೆರೆಯುವ ಭರವಸೆಯನ್ನು ವಿತ್ತ ಸಚಿವೆ ಈ ಸಂದರ್ಭದಲ್ಲಿ ನೀಡಿದರು. ಅಂಚೆ ಚೀಟಿಗೆ ಪ್ರಯುಕ್ತ ರಾಣಿ ಅಬ್ಬಕ್ಕನ ಭಾವಚಿತ್ರಕ್ಕೆ ಕಲಾವಿದ ವಾಸುದೇವ್ ಕಾಮತ್ ಅವರನ್ನು ಅಭಿನಂದಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮತ್ತು ಕರ್ನಾಟಕ ವೃತ್ತದ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಎಸ್ ರಾಜೇಂದ್ರ ಕುಮಾರ್ ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com