ನಗರದಲ್ಲಿ ಸದ್ಯಕ್ಕಿಲ್ಲ ಹೊಸ ಪಾರ್ಕಿಂಗ್ ವ್ಯವಸ್ಥೆ: ಬಿಬಿಎಂಪಿ ಸ್ಪಷ್ಟನೆ

ನಗರದಲ್ಲಿ ಹೊಸ ಪಾರ್ಕಿಂಗ್ ವ್ಯವಸ್ಥೆ ಮಾಡುವ ಯಾವುದೇ ಚಿಂತನೆಗಳು ಸದ್ಯಕ್ಕಿಲ್ಲ ಎಂದು ಬಿಬಿಎಂಪಿ ಹೇಳಿದೆ
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ನಗರದಲ್ಲಿ ಹೊಸ ಪಾರ್ಕಿಂಗ್ ವ್ಯವಸ್ಥೆ ಮಾಡುವ ಯಾವುದೇ ಚಿಂತನೆಗಳು ಸದ್ಯಕ್ಕಿಲ್ಲ ಎಂದು ಬಿಬಿಎಂಪಿ ಹೇಳಿದೆ.

ಗುತ್ತಿಗೆ ಆಧಾರದ ಮೇಲೆ ನಗರದಲ್ಲಿ ಪಾಲಿಕೆ ಆರಂಭಿಸಲಾಗಿದ್ದ ಪೇ ಆ್ಯಂಡ್ ಪಾರ್ಕ್ ವ್ಯವಸ್ಥೆಗೆ ಸಾರ್ವಜನಿಕರಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ, ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ.

ಸಂಚಾರ ದಟ್ಟಣೆ ಸಮಸ್ಯೆಯಿಂದಾಗಿ ಕನ್ನಿಂಗ್‌ಹ್ಯಾಮ್ ರಸ್ತೆಯಲ್ಲಿ ಪೇ ಆ್ಯಂಡ್ ಪಾರ್ಕಿಂಗ್ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ. ಅಲ್ಲದೆ, 36 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧೆಡೆ ಪಾರ್ಕಿಂಗ್ ವ್ಯವಸ್ಥೆ ಆರಂಭಿಸಲು ಬಿಬಿಎಂಪಿ ಕರೆದಿದ್ದ ಟೆಂಡರ್‌ಗೂ ಯಾವುದೇ ಪ್ರತಿಕ್ರಿಯೆಗಳು ವ್ಯಕ್ತವಾಗಿಲ್ಲ ಎಂದು ತಿಳಿದುಬಂದಿದೆ.

ಎರಡು ಬಾರಿ ಟೆಂಡರ್ ಕರೆದಿದ್ದೇವೆ ಆದರೆ ಯಾರೊಬ್ಬರೂ ಆಸಕ್ತಿ ತೋರಿಲ್ಲ. ನಾಲ್ಕು ಚಕ್ರದ ವಾಹನಗಳಿಗೆ ಗಂಟೆಗೆ 30 ಮತ್ತು ದ್ವಿಚಕ್ರ ವಾಹನಗಳಿಗೆ 20 ರೂ. ವಿಧಿಸಲು ಚಿಂತಿಸಿದ್ದೆವು, ರಸ್ತೆಗಳ ಆಧಾರದ ಮೇಲೆ ದರ ಪರಿಷ್ಕರಿಸಲೂ ಚಿಂತಿಸಲಾಗಿತ್ತು. ರಸ್ತೆಗಳ ಪಟ್ಟಿಯನ್ನು DULT ಸಹಾಯದಿಂದ ಗುರುತಿಸಲಾಗಿತ್ತು. ಆದರೆ, ಈ ಯಾವ ಚಿಂತನೆಗಳೂ ಪ್ರಗತಿಕಂಡಿಲ್ಲ. ಸರ್ಕಾರದೊಂದಿಗೂ ಈ ಬಗ್ಗೆ ಮಾತುಕತೆ ನಡೆಸಿದ್ದೆವು. ಆದರೆ, ಅಧಿಕಾರಿಗಳು ಈ ಚಿಂತನೆಯಿಂದ ಸದ್ಯಕ್ಕೆ ದೂರ ಇರುವಂತೆ ತಿಳಿಸಿದರು ಎಂದು ಬಿಬಿಎಂಪಿ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

2020 ರಲ್ಲಿ ಬಿಬಿಎಂಪಿಯು ನಗರದ 10 ರಸ್ತೆಗಳಲ್ಲಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆಯನ್ನು ಪರಿಚಯಿಸಿತ್ತು. ಪಟ್ಟಿಯಲ್ಲಿ ಕನ್ನಿಂಗ್ಹ್ಯಾಮ್ ರಸ್ತೆ, ಎಂಜಿ ರಸ್ತೆ, ಕಸ್ತೂರ್ಬಾ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ರೆಸಿಡೆನ್ಸಿ ರಸ್ತೆ, ಮ್ಯೂಸಿಯಂ ಕ್ರಾಸ್ ರಸ್ತೆ, ವಿಟ್ಟಲ್ ಮಲ್ಯ ಆಸ್ಪತ್ರೆ ರಸ್ತೆ, ವಿಟ್ಟಲ್ ಮಲ್ಯ ರಸ್ತೆ, ಚರ್ಚ್ ಸ್ಟ್ರೀಟ್ ಮತ್ತು ಅಲಿ ಆಸ್ಕರ್ ರಸ್ತೆ ಸೇರಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com