ತಾವು ಓದಿದ್ದ ಕೆರಾಡಿ ಕನ್ನಡ ಶಾಲೆ ದತ್ತು ಪಡೆದ ನಟ ರಿಷಬ್‌ ಶೆಟ್ಟಿ

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದ ಮೂಲಕ ಸರ್ಕಾರಿ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿ ಮೂಡಿಸಿದ್ದ ನಟ, ನಿರ್ದೇಶಕ ರಿಷಬ್​ ಶೆಟ್ಟಿ ಅವರು, ಕೇವಲ ಸಿನಿಮಾದಲ್ಲಿ ಮಾತ್ರವಲ್ಲದೆ ನಿಜಜೀವನದಲ್ಲಿ ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ.
ಉಡುಪಿ ಜಿಲ್ಲೆಯ ಕೆರಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಸಭೆಯಲ್ಲಿ ನಟ ರಿಷಬ್ ಶೆಟ್ಟಿ
ಉಡುಪಿ ಜಿಲ್ಲೆಯ ಕೆರಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಸಭೆಯಲ್ಲಿ ನಟ ರಿಷಬ್ ಶೆಟ್ಟಿ

ಕುಂದಾಪುರ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದ ಮೂಲಕ ಸರ್ಕಾರಿ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿ ಮೂಡಿಸಿದ್ದ ನಟ, ನಿರ್ದೇಶಕ ರಿಷಬ್​ ಶೆಟ್ಟಿ ಅವರು, ಕೇವಲ ಸಿನಿಮಾದಲ್ಲಿ ಮಾತ್ರವಲ್ಲದೆ ನಿಜಜೀವನದಲ್ಲಿ ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ.

ಇದಕ್ಕೆ ಪೂರಕವೆಂಬಂತೆ ತಾವು ಓದಿದ್ದ ಕೆರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ಪಡೆದುಕೊಂಡಿದ್ದಾರೆ.

ಇತ್ತೀಚಿಗೆ ಕೆರಾಡಿಗೆ ಭೇಟಿ ನೀಡಿದ್ದ ಅವರು, ಸರ್ಕಾರಿ ಶಾಲೆಗಳನ್ನು ಉಳಿಸುವ ಮತ್ತು ಬೆಳೆಸುವ ಬಗ್ಗೆ ಮಾತನಾಡಿದ್ದರು. ಈ ವೇಳೆ ಗ್ರಾಮದ ಪ್ರಮುಖರು ರಿಷಭ್​ ಶೆಟ್ಟಿ ಅವರನ್ನು ಅಭಿನಂದಿಸಿ ಶುಭಹಾರೈಸಿದ್ದಾರೆ.

ಭಾನುವಾರ ನಡೆದ ಎಸ್‌ಡಿಎಂಸಿ ಸಭೆಯಲ್ಲಿ ರಿಷಬ್‌ ಶೆಟ್ಟಿ ಅವರು, ಶಾಲೆಯನ್ನು ದತ್ತು ತೆಗೆದುಕೊಳ್ಳುವ ನಿರ್ಧಾರವನ್ನು ಪ್ರಕಟಿಸಿದರು.

ಮೂರು ದಶಕಗಳ ಹಿಂದೆ ಶಾಲೆಯಲ್ಲಿ 400 ಮಂದಿ ಮಕ್ಕಳಿದ್ದರು. ಆದರೆ ಪ್ರಸ್ತುತ 71 ಮಂದಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಒಬ್ಬರು ಖಾಯಂ ಶಿಕ್ಷಕರಿದ್ದಾರೆ. ಉಳಿದವರು ಗೌರವ ಶಿಕ್ಷಕರಾಗಿದ್ದಾರೆ. ನಾನು ಸ್ವತಃ ಈ ಶಾಲೆಯ ಸ್ಥಿತಿಗತಿಯನ್ನು ತಿಳಿದುಕೊಂಡಿದ್ದು, ರಿಷಬ್‌ ಫೌಂಡೇಶನ್‌ ಮುಂದಿನ ಶೈಕ್ಷಣಿಕ ವರ್ಷದಿಂದ 5 ವರ್ಷಗಳ ಅವಧಿಗೆ ಈ ಶಾಲೆಯನ್ನು ದತ್ತು ಪಡೆದಿದೆ. ಮೂಲಭೂತ ಸೌಕರ್ಯ ಸಹಿತ ಕೊಠಡಿ, ಪ್ರತೀ ತರಗತಿಗೆ ಶಿಕ್ಷಕರು, ಆವರಣ ಗೋಡೆ, ಅಗತ್ಯವಿದ್ದರೆ ವಾಹನದ ವ್ಯವಸ್ಥೆ ಕಲ್ಪಿಸಲಿದೆ. ಇದಲ್ಲದೆ ಎಲ್‌ಕೆಜಿ – ಯುಕೆಜಿ, ನ್ಪೋಕನ್‌ ಇಂಗ್ಲಿಷ್‌ ಕಲಿಕೆ ಆರಂಭಿಸುವ ಯೋಜನೆಯಿದೆ ಎಂದು ಹೇಳಿದರು.

ರಿಷಬ್ ಶೆಟ್ಟಿಯವರು ಹೆಚ್ಚುವರಿ ಶಿಕ್ಷಕರ ನೇಮಕಹಾಗೂ ಸ್ಪೋಕನ್ ಇಂಗ್ಲಿಷ್ ತರಗತಿಯನ್ನು ಪರಿಚಯಿಸುವ ಮೂಲಕ ಶಾಲೆಯ ಶೈಕ್ಷಣಿಕ ವಾತಾವರಣವನ್ನು ಬದಲಾಯಿಸಲು ಬಯಸುತ್ತಿದ್ದಾರೆ. ಶೀಘ್ರದಲ್ಲೇ ಇಲಾಖೆಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆಂದು ಉಡುಪಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com