ರಾಜ್ಯ ಪೊಲೀಸರಿಂದ ಶಾಲಾ-ಕಾಲೇಜುಗಳಲ್ಲಿ ಡ್ರಗ್ಸ್ ಕುರಿತು ಬೃಹತ್ ಜಾಗೃತಿ ಅಭಿಯಾನ

ರಾಜ್ಯದಲ್ಲಿ ಡ್ರಗ್ಸ್ ವಿರುದ್ಧದ ಕ್ರಮವನ್ನು ಮತ್ತಷ್ಟು ಹೆಚ್ಚಿಸಲು ಕರ್ನಾಟಕ ಪೊಲೀಸ್ ಮಹಾನಿರ್ದೇಶಕರು, ಡ್ರಗ್ಸ್ ಬಳಕೆ ಮತ್ತು ದುಷ್ಪರಿಣಾಮಗಳ ವಿರುದ್ಧ ಬೃಹತ್ ಸಾರ್ವಜನಿಕ ಜಾಗೃತಿ ಕಾರ್ಯಕ್ರಮ ನಡೆಸುವಂತೆ ಎಲ್ಲಾ ಪೊಲೀಸ್ ಆಯುಕ್ತರು ಮತ್ತು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ವಿರುದ್ಧದ ಕ್ರಮವನ್ನು ಮತ್ತಷ್ಟು ಹೆಚ್ಚಿಸಲು ಕರ್ನಾಟಕ ಪೊಲೀಸ್ ಮಹಾನಿರ್ದೇಶಕರು, ಡ್ರಗ್ಸ್ ಬಳಕೆ ಮತ್ತು ದುಷ್ಪರಿಣಾಮಗಳ ವಿರುದ್ಧ ಬೃಹತ್ ಸಾರ್ವಜನಿಕ ಜಾಗೃತಿ ಕಾರ್ಯಕ್ರಮ ನಡೆಸುವಂತೆ ಎಲ್ಲಾ ಪೊಲೀಸ್ ಆಯುಕ್ತರು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

"ಪೊಲೀಸ್ ಸಬ್-ಇನ್ಸ್‌ಪೆಕ್ಟರ್(ಪಿಎಸ್‌ಐ) ಶ್ರೇಣಿಯಿಂದ ಪೊಲೀಸ್ ವರಿಷ್ಠಾಧಿಕಾರಿ/ಪೊಲೀಸ್ ಉಪ ಆಯುಕ್ತ(ಎಸ್‌ಪಿ/ಡಿಸಿಪಿ) ಶ್ರೇಣಿಯ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಕಾಲೇಜುಗಳು ಮತ್ತು ಶಾಲೆಗಳಿಗೆ ಡಿಸೆಂಬರ್ 20 ರಂದು ಭೇಟಿ ನೀಡಿ ಜಾಗೃತಿ ಕಾರ್ಯಕ್ರಮ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಈ ನಿಟ್ಟಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಮಾದಕ ದ್ರವ್ಯ ಮತ್ತು ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರಸ್ತುತಿ, ಕಿರುನಾಟಕ, ಚರ್ಚಾಸ್ಪರ್ಧೆ, ಸಂವಾದ ಇತ್ಯಾದಿಗಳನ್ನು ಆಯೋಜಿಸಬೇಕು. ರಾಜ್ಯವನ್ನು ಡ್ರಗ್ಸ್ ಮುಕ್ತಗೊಳಿಸಲು ಕರ್ನಾಟಕ ರಾಜ್ಯ ಪೊಲೀಸ್ ಬದ್ಧವಾಗಿದೆ" ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com