ಬೆಳಗಾವಿ ಸಂತ್ರಸ್ತ ಮಹಿಳೆಗೆ 2 ಎಕರೆ ಭೂಮಿ, 5 ಲಕ್ಷ ರೂ. ಪರಿಹಾರ ವಿತರಿಸಿದ ಸತೀಶ್ ಜಾರಕಿಹೊಳಿ

ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಪ್ರಕರಣದ ಸಂತ್ರಸ್ತ ಮಹಿಳೆಗೆ ರಾಜ್ಯ ಸರ್ಕಾರ ಮಂಗಳವಾರ ಎರಡು ಎಕರೆ ಭೂಮಿ ಹಾಗೂ ಐದು ಲಕ್ಷ ರೂಪಾಯಿ ಪರಿಹಾರದ ಚೆಕ್ ನೀಡಿದೆ.
ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಪ್ರಕರಣದ ಸಂತ್ರಸ್ತ ಮಹಿಳೆಗೆ ರಾಜ್ಯ ಸರ್ಕಾರ ಮಂಗಳವಾರ ಎರಡು ಎಕರೆ ಭೂಮಿ ಹಾಗೂ ಐದು ಲಕ್ಷ ರೂಪಾಯಿ ಪರಿಹಾರದ ಚೆಕ್ ನೀಡಿದೆ.

ಇಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮುಖ್ಯಮಂತ್ರಿಗಳ ನಿಧಿಯಿಂದ 5 ಲಕ್ಷ ರೂ. ಪರಿಹಾರದ ಚೆಕ್​ ವಿತರಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ ಅವರು, ಐದು ಲಕ್ಷ ರೂಪಾಯಿ ಜೊತೆಗೆ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಸಂತ್ರಸ್ತ ಮಹಿಳೆಗೆ 2 ಎಕರೆ ಜಮೀನು ಮಂಜೂರು ಮಾಡಲಾಗಿದೆ ಎಂದು ಹೇಳಿದರು.

ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವ ಮುನ್ನವೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆದರೂ ಪ್ರಕರಣವನ್ನು ಸರ್ಕಾರ ಸಿಐಡಿಗೆ ಒಪ್ಪಿಸಿದೆ. ತನಿಖೆ ಬಗ್ಗೆ ಯಾವುದೇ ಸಂಶಯ ಬೇಡ ಎಂದು ಸಿಐಡಿಗೆ ಕೊಟ್ಟಿದ್ದಾರೆ. ಇಂತಹದೊಂದು ಘಟನೆ ಆಗಬಾರದಿತ್ತು. ಆದರೆ ನಮ್ಮ ಭಾಗದಲ್ಲಿ ಆಗಿದೆ. ಮುಂದೆ ಇಂತಹ ಘಟನೆ ಆಗದಂತೆ ನೋಡಿಕೊಳ್ಳೋಣ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com