ಬೆಂಗಳೂರು: ಇಬ್ಬರು ಅಪ್ರಾಪ್ತ ಸಹೋದರಿಯರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದ ವ್ಯಕ್ತಿ, ಪುತ್ರರ ಬಂಧನ

ಇಬ್ಬರು ಅಪ್ರಾಪ್ತ ಸಹೋದರಿಯರಿಗೆ ಕೆಲಸ ನೀಡಿದ್ದ ವ್ಯಕ್ತಿ ಹಾಗೂ ಆತನ ಇಬ್ಬರು ಪುತ್ರರನ್ನು ಪೊಲೀಸರು ಬಂಧಿಸಿದ್ದಾರೆ. ಜಯನಗರ ಪೊಲೀಸರು 51 ವರ್ಷದ ವ್ಯಕ್ತಿಯೊಬ್ಬನ ಮನೆಯಲ್ಲಿ ತಪಾಸಣೆ ನಡೆಸಿ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿದ್ದಾರೆ. ಇವರು ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯ ಪತ್ನಿಯನ್ನು ನೋಡಿಕೊಳ್ಳುತ್ತಿದ್ದರು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಇಬ್ಬರು ಅಪ್ರಾಪ್ತ ಸಹೋದರಿಯರಿಗೆ ಕೆಲಸ ನೀಡಿದ್ದ ವ್ಯಕ್ತಿ ಹಾಗೂ ಆತನ ಇಬ್ಬರು ಪುತ್ರರನ್ನು ಪೊಲೀಸರು ಬಂಧಿಸಿದ್ದಾರೆ. ಜಯನಗರ ಪೊಲೀಸರು 51 ವರ್ಷದ ವ್ಯಕ್ತಿಯೊಬ್ಬನ ಮನೆಯಲ್ಲಿ ತಪಾಸಣೆ ನಡೆಸಿ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿದ್ದಾರೆ. ಇವರು ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯ ಪತ್ನಿಯನ್ನು ನೋಡಿಕೊಳ್ಳುತ್ತಿದ್ದರು. 10 ಮತ್ತು 8 ವರ್ಷದ ಬಾಲಕಿಯರು ಬಿಹಾರ ಮೂಲದವರಾಗಿದ್ದು, ಪ್ರಸ್ತುತ ಸರ್ಕಾರದ ವಸತಿ ಗೃಹದಲ್ಲಿ ಇರಿಸಲಾಗಿದೆ. ಈ ಸಂಬಂಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಖಾಸಗಿ ಸಂಸ್ಥೆಯೊಂದರಲ್ಲಿ ಹಿರಿಯ ಅಧಿಕಾರಿಯಾಗಿರುವ ಅಶೋಕ್ ಕುಮಾರ್ ಮತ್ತು ಅವರ 27 ಮತ್ತು 25 ವರ್ಷದ ಇಬ್ಬರು ಪುತ್ರರು ಬಂಧಿತರು. ಸಹೋದರಿಯರು ಅಶೋಕ್ ಕುಮಾರ್ ಅವರ ಪತ್ನಿ ಪಿಂಕಿ ಜೈನ್ ಎಂಬ ಮಹಿಳೆಯನ್ನು ನೋಡಿಕೊಳ್ಳುವ ಕೆಲಸ ಮಾಡುತ್ತಿದ್ದರು. ಬಾಲಕಿಯರ ಪೋಷಕರು ಪ್ರಸ್ತುತ ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದು, ಅಶೋಕ್ ಕುಮಾರ್ ಅವರ ಪುತ್ರರು ಬಾಲಕಿಯರನ್ನು ನಗರಕ್ಕೆ ಕರೆತರಲು ಅಲ್ಲಿಗೆ ಹೋಗಿದ್ದರು ಎನ್ನಲಾಗಿದೆ.

ಮೂವರನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಬಾಲಕಿಯರನ್ನು ಅವರ ಪೋಷಕರ ಬಳಿಗೆ ಕಳುಹಿಸಲಾಗುವುದು. 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಪ್ರಾಪ್ತರನ್ನು ಕುಟುಂಬ ಆಧಾರಿತ ಉದ್ಯೋಗಗಳಿಗೆ ನೇಮಿಸಿಕೊಳ್ಳುವುದು ಕಾನೂನುಬಾಹಿರವಾಗಿದೆ ಮತ್ತು ಯಾವುದೇ ರೀತಿಯ ಅಪಾಯಕಾರಿ ಉದ್ಯೋಗದಲ್ಲಿ ಕೆಲಸ ಮಾಡಲಾಗುವುದಿಲ್ಲ ಎಂದು ಪೊಲೀಸರು ಹೇಳಿದರು.

ಅಶೋಕ್ ಕುಮಾರ್ ಮತ್ತು ಅವರ ಪುತ್ರರ ವಿರುದ್ಧ ಬಾಲನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆ  2015 ಮತ್ತು ಬಾಲಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಜಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com