ಕೋವಿಡ್ ಜೆಎನ್.1 ರೂಪಾಂತರಿ: ರಾಮನಗರ ಜಿಲ್ಲೆಯ ವಿದ್ಯಾರ್ಥಿಗೆ ಕೊರೋನಾ ಸೋಂಕು ದೃಢ

ಮಂಡ್ಯ ಜಿಲ್ಲೆಯ ಮದ್ದೂರಿನ ವೃದ್ಧರೊಬ್ಬರಿಗೆ ಕೋವಿಡ್ ಪಾಸಿಟಿವ್ ವರದಿಯಾದ ಬಳಿಕ ರಾಮನಗರ ಜಿಲ್ಲೆಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ

ರಾಮನಗರ: ಮಂಡ್ಯ ಜಿಲ್ಲೆಯ ಮದ್ದೂರಿನ ವೃದ್ಧರೊಬ್ಬರಿಗೆ ಕೋವಿಡ್ ಪಾಸಿಟಿವ್ ವರದಿಯಾದ ಬಳಿಕ ರಾಮನಗರ ಜಿಲ್ಲೆಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 

ಇಂದು ನಡೆಸಲಾದ ರ್ಯಾಂಡಮ್ ಟೆಸ್ಟ್ ನಲ್ಲಿ ಅಮೃತ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗೆ ಕೊರೋನಾ ಸೋಂಕು ಬಂದಿರುವುದು ದೃಢವಾಗಿದೆ ಎಂದು ಜಿಲ್ಲೆಯ ಆರೋಗ್ಯ ಇಲಾಖೆ ಅಧಿಕಾರಿ ಕಾಂತರಾಜು ತಿಳಿಸಿದ್ದಾರೆ.

ರಾಮನಗರ ಜಿಲ್ಲೆಯ ಬಿಡದಿ ಹೋಬಳಿ ಬೈರಮಂಗಲ ನಿವಾಸಿಯಾಗಿರುವ ವಿದ್ಯಾರ್ಥಿಯನ್ನು ಐಸೊಲೇಷನ್ ನಲ್ಲಿರಿಸಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನಲ್ಲಿ ಒಬ್ಬ ವೃದ್ಧರಿಗೆ ಈಗಾಗಲೇ ಒಬ್ಬರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com