ಬೆಂಗಳೂರು: ತನ್ನ ಸಂಗಾತಿಗೆ ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಾಯಿಸಿದ ಆರೋಪದ ಮೇಲೆ ಪ್ರೇಮಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಸಂತ್ರಸ್ತೆ ಘಟನೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಹಾಸನ ಜಿಲ್ಲಾ ಪೊಲೀಸ್, ಬೆಂಗಳೂರು ಪೊಲೀಸ್ ಕಮಿಷನರ್‌ರನ್ನು ಟ್ಯಾಗ್ ಮಾಡಿದ್ದಾರೆ.
ತನ್ನ ಪೋಸ್ಟ್‌ನಲ್ಲಿ, ತಾವು ಬಾಲಕೃಷ್ಣ ಸುನೀಲ್ ಎಂಬಾತನೊಂದಿಗೆ ಆರು ವರ್ಷಗಳ ಸುದೀರ್ಘ ಸಂಬಂಧವನ್ನು ಹೊಂದಿದ್ದು, ತನ್ನ ಪ್ರೇಮಿ ತನ್ನನ್ನು ದೈಹಿಕವಾಗಿಯೂ ಬಳಸಿಕೊಂಡಿದ್ದ. ಇದೀಗ ಗರ್ಭಪಾತಕ್ಕೆ ಒಳಗಾಗುವಂತೆ ಒತ್ತಾಯಿಸಿದ್ದಾನೆ ಎಂದು ಅವರು ಆರೋಪಿಸಿದ್ದಾರೆ.
ಆತ ತನ್ನ ಬಳಿಯಿದ್ದ ಹಣವನ್ನು ಕಿತ್ತುಕೊಂಡಿದ್ದಾನೆ ಮತ್ತು ತಾವಿಬ್ಬರೂ ಬೆಂಗಳೂರಿನಲ್ಲಿ ಒಟ್ಟಿಗೆ ವಾಸಿಸುತ್ತಿದ್ದೆವು. ಇದೀಗ ಆರೋಪಿಯು ಬೇರೊಬ್ಬ ಮಹಿಳೆಯನ್ನು ಮದುವೆಯಾಗಿ ಹಾಸನ ಜಿಲ್ಲೆಯ ಅಗಲಟ್ಟಿ ಗ್ರಾಮದಲ್ಲಿ ನೆಲೆಸಿದ್ದ ಎನ್ನಲಾಗಿದೆ.
ತನ್ನನ್ನು ತಮ್ಮ ಮಗಳೆಂದು ಪರಿಗಣಿಸಿ ಆರೋಪಿಗಳಿಗೆ ಶಿಕ್ಷೆ ವಿಧಿಸಿ ನ್ಯಾಯ ದೊರಕಿಸಿಕೊಡುವಂತೆ ಸಂತ್ರಸ್ತೆಯು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
Advertisement