ವಿದ್ಯಾರ್ಥಿಗಳಿಂದ ಶೌಚಗುಂಡಿ ಸ್ವಚ್ಛ ಪ್ರಕರಣ: ಕೋಲಾರ ಶಾಲೆಗೆ ಆರ್‌.ಅಶೋಕ್ ಭೇಟಿ; ನ್ಯಾಯಾಂಗ ತನಿಖೆಗೆ ಒತ್ತಾಯ

ಮಾಲೂರು ತಾಲ್ಲೂಕಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಲದ ಗುಂಡಿ ಸ್ವಚ್ಛತೆಗೆ ಮಕ್ಕಳನ್ನು ಬಳಸಿಕೊಂಡ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸುವಂತೆ ವಿಪಕ್ಷ ನಾಯಕ ಆರ್ ಅಶೋಕ್ ಒತ್ತಾಯಿಸಿದ್ದಾರೆ.
ಶೌಚಗುಂಡಿ ಸ್ವಚ್ಥ ಪ್ರಕರಣ ಸ್ಥಳಕ್ಕೆ ಅಶೋಕ್ ಭೇಟಿ
ಶೌಚಗುಂಡಿ ಸ್ವಚ್ಥ ಪ್ರಕರಣ ಸ್ಥಳಕ್ಕೆ ಅಶೋಕ್ ಭೇಟಿ

ಕೋಲಾರ: ಮಾಲೂರು ತಾಲ್ಲೂಕಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಲದ ಗುಂಡಿ ಸ್ವಚ್ಛತೆಗೆ ಮಕ್ಕಳನ್ನು ಬಳಸಿಕೊಂಡ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸುವಂತೆ ವಿಪಕ್ಷ ನಾಯಕ ಆರ್ ಅಶೋಕ್ ಒತ್ತಾಯಿಸಿದ್ದಾರೆ.

ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಆರ್‌.ಅಶೋಕ್ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ರಾಜ್ಯ ಸರ್ಕಾರದ ವಿರುದ್ಧ ಅವರು ವಾಗ್ದಾಳಿ ನಡೆಸಿದರು. ಸರ್ಕಾರಕ್ಕೆ ಮುಜುಗರ ಆಗದಂತೆ ಈ ಪ್ರಕರಣವನ್ನು ಮುಚ್ಚಿಹಾಕುವ ಯತ್ನ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ.

ಹಾಲಿ ನ್ಯಾಯಾಧೀಶರದಿಂದ ತನಿಖೆಗೆ ಆಗ್ರಹಿಸಿದರು. ಮಲದ ಗುಂಡಿ ಪರಿಶೀಲನೆ ವೇಳೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್‌ ಅವರನ್ನು ತರಾಟೆಗೆ ತೆಗೆದುಕೊಂಡರು. ಮಕ್ಕಳನ್ನು ಮುಚ್ಚಿದ ಕೋಣೆಯಲ್ಲಿ ಮಾತನಾಡಿಸಿದರು.

ಡಿ.1ರಂದು ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛತೆ ಮಾಡಿಸಲಾಗಿದೆ. ಈ ವಿಚಾರ ಇಲಾಖೆಯ ಅಧಿಕಾರಿಗಳ ಗಮನಕ್ಕೆ ಬಂದಿದ್ದರೂ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ಮಾಡಲಾಗಿದೆ. ಇವತ್ತು ಜಿಲ್ಲಾ ಉಸ್ತುವಾರಿ ಸಚಿವರು ಬಂದಿದ್ದಾರೆ. ಪ್ರಾಂಶುಪಾಲರು ಹಾಗೂ ಶಿಕ್ಷಕರ ವಿರುದ್ಧ ಮಾತ್ರ ಅಲ್ಲ; ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ನ್ಯಾಯಾಧೀಶರು ರಾಜ್ಯದ ಎಲ್ಲಾ ಕಡೆ ತೆರಳಿ ವರದಿ ನೀಡಿದರೆ ಸರ್ಕಾರದ ಕಾಮಾಲೆ ಕಣ್ಣು ತೆರೆಯಲು ಸಾಧ್ಯ ಎಂದರು.

ಮಕ್ಕಳಿಗೆ ಸರಿಯಾದ ಆಹಾರ ಸಿಗುತ್ತಿಲ್ಲ. ಹಾಸ್ಟೆಲ್‌ಗಳಲ್ಲಿರುವ 240 ಮಕ್ಕಳಿಗೆ ಕೇವಲ ನಾಲ್ಕು ಲೀಟರ್‌ ಹಾಲು ನೀಡುತ್ತಿದ್ದು, ತರಕಾರಿ ಪೂರೈಸುತ್ತಿಲ್ಲ, ಯಾವೊಬ್ಬ ಶಿಕ್ಷಕರೂ ಅವರಿಗೆ ನೀಡಿರುವ ವಸತಿಗೃಹದಲ್ಲಿ ಉಳಿದುಕೊಳ್ಳುತ್ತಿಲ್ಲ ಎಂದು ಆರೋಪಿಸಿದರು.

ಏತನ್ಮಧ್ಯೆ, ಯಲುವಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಎಸ್‌ಸಿ ವಿದ್ಯಾರ್ಥಿಗಳು ಆವರಣದಲ್ಲಿರುವ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವಂತೆ ಒತ್ತಾಯಿಸಿದ ವರದಿಯಲ್ಲಿ ಪತ್ರಿಕೆಗಳಲ್ಲಿ ಪ್ರಕಟವಾದ ಪ್ರಕರಣವನ್ನು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com