ಕೊರೋನಾಗೆ ಬೆಂಗಳೂರಿನಲ್ಲಿ ವ್ಯಕ್ತಿ ಸಾವು; ದೇಶದಲ್ಲಿ 20 ಜೆಎನ್​1 ಕೇಸ್ ದಾಖಲು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಕೊರೊನಾ ವೈರಸ್​ನ ಜೆಎನ್​ 1 (Coronavirus JN.1) ರೂಪಾಂತರಿ ಅತ್ಯಂತ ವೇಗವಾಗಿ ವ್ಯಾಪಿಸುತ್ತಿದ್ದು, ಕರ್ನಾಟಕದಲ್ಲಿ ಕೊರೋನಾ ಸೋಂಕಿಗೆ 64 ವರ್ಷದ ವೃದ್ಧರೊಬ್ಬರು ಐದು ದಿನಗಳ ಹಿಂದೆ ಮೃತಪಟ್ಟಿದ್ದಾರೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ವಿಕಾಸ ಸೌಧದಲ್ಲಿ ಇಂದು ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ವಿಕಾಸ ಸೌಧದಲ್ಲಿ ಇಂದು ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಬೆಂಗಳೂರು: ಕೊರೊನಾ ವೈರಸ್​ನ ಜೆಎನ್​ 1 (Coronavirus JN.1) ರೂಪಾಂತರಿ ಅತ್ಯಂತ ವೇಗವಾಗಿ ವ್ಯಾಪಿಸುತ್ತಿದ್ದು, ಕರ್ನಾಟಕದಲ್ಲಿ ಕೊರೋನಾ ಸೋಂಕಿಗೆ 64 ವರ್ಷದ ವೃದ್ಧರೊಬ್ಬರು ಐದು ದಿನಗಳ ಹಿಂದೆ ಮೃತಪಟ್ಟಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯ 64 ವರ್ಷದ ನಿವಾಸಿಗೆ ಕೊರೊನಾ ಜೊತೆ ಅನ್ಯ ಕಾಯಿಲೆಗಳು ಕೂಡ ಇದ್ದವು. ಟಿಬಿ, ಬಿಪಿ ಸೇರಿದಂತೆ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು. ಈ ನಡುವೆ ಕೊರೊನಾ ಪಾಸಿಟಿವ್ ಕೂಡ ಆಗಿತ್ತು. ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು 5 ದಿನಗಳ ಹಿಂದೆಯಷ್ಟೇ ಮೃತಪಟ್ಟಿದ್ದಾರೆ ಎಂದು ತಿಳಿಸಿದರು.

ಮೃತ ವ್ಯಕ್ತಿಯ ಕುಟುಂಬದಲ್ಲಿ ಒಟ್ಟು 5 ಮಂದಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ಈ ವೇಳೆ ಐವರಿಗೂ ನೆಗೆಟಿವ್‌ ಬಂದಿದೆ. ಸದ್ಯ ಐದು ಜನರು ಕೂಡ ಕ್ವಾರಂಟೈನ್ ನಲ್ಲಿ ಇದ್ದಾರೆ. ಮೃತಪಟ್ಟ ಆದ ವ್ಯಕ್ತಿಯ ಜೆನೆಮಿಕ್ ಸೀಕ್ವೆನ್ಸ್ ರಿಪೋರ್ಟ್ ಗಾಗಿ ಬಿಬಿಎಂಪಿ ಕಾಯುತ್ತಿದೆ ಎಂದರು.

ದೇಶದಲ್ಲಿ ಒಟ್ಟು 20 JN.1 ಪ್ರಕರಣ:

ದೇಶದಲ್ಲಿ ಒಟ್ಟು 20 ಸೋಂಕು ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಮುನ್ಸುಖ್ ಮಾಂಡವೀಯ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದು, ಅದರಲ್ಲಿ ರಾಜ್ಯದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭಾಗವಹಿಸಿದ್ದಾರೆ. ಸಭೆಯ ನಂತರ ಇಂದು ವಿಕಾಸ ಸೌಧದಲ್ಲಿ ಸಚಿವರು ಸುದ್ದಿಗೋಷ್ಠಿ ನಡೆಸಿದರು. 

ರಾಜ್ಯದಲ್ಲಿ ಕೋವಿಡ್​ ಪರಿಸ್ಥಿತಿ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪಡೆದಿದೆ. ಜೆಎನ್.1 ವೈರಸ್​​ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಡಿದೆ. ದೇಶದಲ್ಲಿ 20 ಜೆಎನ್.1 ಪ್ರಕರಣಗಳು ಪತ್ತೆಯಾಗಿವೆ. ಗೋವಾದಲ್ಲಿ 18, ಮಹಾರಾಷ್ಟ್ರದಲ್ಲಿ 1, ಕೇರಳದಲ್ಲಿ 1 ಕೇಸ್​ ಪತ್ತೆಯಾಗಿದೆ ಎಂದು ಹೇಳಿದರು. 

ನಾಳೆ ಸಿಎಂ ಟಿಎಸಿ ಸಭೆ: ಕೋವಿಡ್ ಕುರಿತು ನಾಳೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ತಾಂತ್ರಿಕ ಸಲಹಾ ಸಮಿತಿ ಜತೆ ನಡೆಸಲಿದ್ದಾರೆ. ಆ ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚಿಸುತ್ತೇವೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಹೈರಿಸ್ಕ್ ದೇಶಗಳಿಂದ ಬಂದವರಿಗೆ ಸದ್ಯಕ್ಕಿಲ್ಲ ತಪಾಸಣೆ: ಹೈರಿಸ್ಕ್​​ ದೇಶಗಳಿಂದ ಬರುವವರಿಗೆ ಸದ್ಯಕ್ಕೆ ಸ್ಕ್ರೀನಿಂಗ್ ಇಲ್ಲ. ಕೇರಳದಿಂದ ಬರುವ ಅಯ್ಯಪ್ಪ ಭಕ್ತರಿಗೂ ಸ್ಕ್ರೀನಿಂಗ್​​ ಮಾಡಲು ಹೇಳಿಲ್ಲ. ಕೋವಿಡ್ ಲಕ್ಷಣವಿದ್ದರೆ ಮಾತ್ರ ಪರೀಕ್ಷೆಗೆ ಒಳಪಡಿಸಲು ಸೂಚನೆ ನೀಡಲಾಗಿದೆ. ಕೇರಳ ಗಡಿಯ 4 ಜಿಲ್ಲೆಗಳಲ್ಲಿ ಹೆಚ್ಚು ಕೋವಿಡ್ ಟೆಸ್ಟ್​ ಮಾಡಲಾಗುತ್ತದೆ ಎಂದರು. 

ಕಳೆದ ಬಾರಿ ಶೇಕಡಾ 90ರಷ್ಟು ಜನರು ಹೋಂ ಕ್ವಾರಂಟೈನ್​ನಲ್ಲಿ ಇದ್ದರು. ಟೆಸ್ಟಿಂಗ್ ಕಿಟ್, ಮಾಸ್ಕ್, ಔಷಧ ವಿತರಣೆಗೆ ಸಿದ್ಧತೆ ಮಾಡಿಕೊಂಡಿದ್ದೇವೆ. ಖಾಸಗಿ ಆಸ್ಪತ್ರೆಗಳಿಗೂ ದರ ನಿಗದಿ ಸಂಬಂಧ ನಾಳೆ ಚರ್ಚೆ ಆಗಲಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಆರ್​ಟಿ-ಪಿಸಿಆರ್ ಟೆಸ್ಟ್ ದರದ ಬಗ್ಗೆ ಚರ್ಚೆ ಮಾಡುತ್ತೇವೆ. ಸದ್ಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಆರ್​ಟಿ-ಇಸಿಆರ್ ಟೆಸ್ಟ್ ಉಚಿತ ಇದೆ. ರಾಜ್ಯದಲ್ಲಿ ನಿತ್ಯ ಐದು ಸಾವಿರ ಟೆಸ್ಟಿಂಗ್ ಮಾಡುತ್ತೇವೆ ಎಂದು ವಿವರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com