ರಾಜ್ಯದಲ್ಲಿ ಮತ್ತೆ ಕೊರೋನಾ ಹೆಚ್ಚಳ: ಇಂದು 20 ಪ್ರಕರಣ ಪತ್ತೆ; ಇಬ್ಬರು ಸಾವು

ಕಳೆದ ಎರಡು ವರ್ಷಗಳಿಂದ ದೂರವಾಗಿದ್ದ ಮಹಾಮಾರಿ ಕೊರೋನಾ ಇದೀಗ ಮತ್ತೆ ತನ್ನ ಆರ್ಭಟ ಶುರು ಮಾಡಿಕೊಂಡಿದೆ. ಇಂದು ರಾಜ್ಯದಲ್ಲಿ 20 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಇಬ್ಬರು ಸಾವನ್ನಪ್ಪಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕಳೆದ ಎರಡು ವರ್ಷಗಳಿಂದ ದೂರವಾಗಿದ್ದ ಮಹಾಮಾರಿ ಕೊರೋನಾ ಇದೀಗ ಮತ್ತೆ ತನ್ನ ಆರ್ಭಟ ಶುರು ಮಾಡಿಕೊಂಡಿದೆ. ಇಂದು ರಾಜ್ಯದಲ್ಲಿ 20 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಇಬ್ಬರು ಸಾವನ್ನಪ್ಪಿದ್ದಾರೆ.

ಈ ಮಧ್ಯೆ ರಾಜ್ಯದಲ್ಲಿ ಇಂದು ಒಂದೇ ದಿನ 22 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರರೊಂದಿಗೆ ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ 92ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 19, ಬಳ್ಳಾರಿಯಲ್ಲಿ 2, ದಕ್ಷಿಣ ಕನ್ನಡದಲ್ಲಿ 1 ಪ್ರಕರಣ ಪತ್ತೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 808 ಪರೀಕ್ಷೆಗಳನ್ನು ಮಾಡಲಾಗಿದ್ದು, ಇವುಗಳಲ್ಲಿ 407 ಆರ್‌ಟಿ-ಪಿಸಿಆರ್ ಮತ್ತು 401 ರಾಪಿಡ್ ಆಂಟಿಜೆನ್ ಪರೀಕ್ಷೆಗಳಾಗಿವೆ. ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣವು 2.49 ಪ್ರತಿಶತದಷ್ಟಿದ್ದರೆ, ಪ್ರಕರಣದ ಸಾವಿನ ಪ್ರಮಾಣವು ಶೇಕಡಾ 10 ರಷ್ಟಿದೆ ಎಂದು ಅದು ಹೇಳಿದೆ.

ಈ ಪೈಕಿ 72 ಮಂದಿಗೆ ಹೋಮ್‌ ಐಸೋಲೇಷನ್‌ನಲ್ಲಿ ಇರಲು ಸೂಚನೆ ನೀಡಲಾಗಿದೆ. 20 ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಐಸಿಯುನಲ್ಲಿ 7 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ನೆರೆಯ ಕೇರಳದಲ್ಲಿ ಕೋವಿಡ್-19 ಜೆಎನ್1 ರೂಪಾಂತರಿ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಾದ ಅಗತ್ಯ ಮುಂಜಾಗ್ರತೆ ಹಾಗೂ ಪೂರ್ವಭಾವಿ ಕ್ರಮಗಳ ಕುರಿತು ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಜಿಲ್ಲೆಗಳಲ್ಲಿ ಅಗತ್ಯ ಸಂಖ್ಯೆಯ ಪರೀಕ್ಷೆ ನಡೆಸಿ, ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಔಷಧ, ಆಕ್ಸಿಜನ್​​, ಬೆಡ್​​ ವ್ಯವಸ್ಥೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಅಲ್ಲದೇ ಕೊವಿಡ್ ಟೆಸ್ಟ್​ ಹೆಚ್ಚಿಸಲು ಅಧಿಕಾರಿಗಳು, ಸಿಬ್ಬಂದಿಗೆ ಸೂಚಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com