ಹೊಟ್ಟೆಯಲ್ಲಿ 20 ಕೋಟಿ ರೂ. ಮೌಲ್ಯದ ಕೊಕೇನ್‌ನೊಂದಿಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ನೈಜೀರಿಯಾ ಪ್ರಜೆ ಬಂಧನ!

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಪ್ರಯಾಣಿಕರಿಂದ 20 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ವಶಪಡಿಸಿಕೊಂಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಪ್ರಯಾಣಿಕರಿಂದ 20 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ವಶಪಡಿಸಿಕೊಂಡಿದ್ದಾರೆ. 

ನೈಜೀರಿಯಾದ ಪ್ರಜೆಯೊಬ್ಬ ತನ್ನ ಹೊಟ್ಟೆಯೊಳಗೆ ಕ್ಯಾಪ್ಸುಲ್‌ಗಳಲ್ಲಿ ಕೊಕೇನ್ ಅನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ್ದನು. ಕಸ್ಟಮ್ಸ್ ಅಧಿಕಾರಿಗಳು 99 ಕ್ಯಾಪ್ಸುಲ್‌ಗಳಲ್ಲಿ ಬಚ್ಚಿಟ್ಟಿದ್ದ 2 ಕೆಜಿ ಕೊಕೇನ್ ಅನ್ನು ವಶಪಡಿಸಿಕೊಂಡಿದ್ದಾರೆ. ಪ್ರಯಾಣಿಕ ಇಥಿಯೋಪಿಯಾದ ಅಡಿಸ್ ಅಬಾಬಾದಿಂದ ಬೆಂಗಳೂರಿಗೆ ಆಗಮಿಸಿದ್ದನು.

ವರದಿ ಪ್ರಕಾರ, 5 ದಿನಗಳ ಕಾಲ ಆಸ್ಪತ್ರೆಯಲ್ಲಿ ಇರಿಸಿ ಕೊಕೇನ್ 99 ಕ್ಯಾಪ್ಸುಲ್ ಗಳನ್ನು ಹೊರ ತೆಗೆಯಲಾಗಿದೆ. ಶಂಕಿತ ವ್ಯಕ್ತಿ ಡಿಸೆಂಬರ್ 11ರಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಎನ್ನಲಾಗಿದೆ. ಆತನ ವಿರುದ್ಧ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್‌ಡಿಪಿಎಸ್) ಕಾಯ್ದೆಯಡಿ ಆರೋಪ ಹೊರಿಸಲಾಗಿದೆ.

ವಿಮಾನ ನಿಲ್ದಾಣದಲ್ಲಿ ಕಳ್ಳಸಾಗಾಣಿಕೆಗೆ ದೊಡ್ಡ ಪ್ರಯತ್ನ
ವರದಿಗಳ ಪ್ರಕಾರ, ಇದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಅತಿದೊಡ್ಡ ಕೊಕೇನ್ ಡ್ರಗ್ ಸರಬರಾಜು ಯತ್ನ ಇದಾಗಿದೆ. ನೈಜೀರಿಯಾ ಪ್ರಜೆ ವೈದ್ಯಕೀಯ ಚಿಕಿತ್ಸೆ ವೀಸಾದಲ್ಲಿ ಭಾರತಕ್ಕೆ ಬಂದಿರುವುದಾಗಿ ವರದಿಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com