ಧಾನ್ಯ ಸರಬರಾಜು ಏಜೆನ್ಸಿಗಳ 2,040 ಕೋಟಿ ರೂ. ಬಾಕಿ ಹಣ ಬಿಡುಗಡೆ ಮಾಡಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ, ಬಿಳಿಜೋಳ ಹಾಗೂ ಅಕ್ಕಿ ಸರಬರಾಜು ಮಾಡಿರುವ ರಾಜ್ಯದ ಏಜೆನ್ಸಿಗಳಿಗೆ ಕೇಂದ್ರ ಸರ್ಕಾರ ರೂ.2,040 ಕೋಟಿ ಉಳಿಸಿಕೊಂಡಿದ್ದು, ಅದನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಆಗ್ರಹಿಸಿದೆ.
ಕೆ.ಎಚ್‌.ಮುನಿಯಪ್ಪ
ಕೆ.ಎಚ್‌.ಮುನಿಯಪ್ಪ

ನವದೆಹಲಿ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ, ಬಿಳಿಜೋಳ ಹಾಗೂ ಅಕ್ಕಿ ಸರಬರಾಜು ಮಾಡಿರುವ ರಾಜ್ಯದ ಏಜೆನ್ಸಿಗಳಿಗೆ ಕೇಂದ್ರ ಸರ್ಕಾರ ರೂ.2,040 ಕೋಟಿ ಉಳಿಸಿಕೊಂಡಿದ್ದು, ಅದನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಆಗ್ರಹಿಸಿದೆ.

ಈ ಸಂಬಂಧ ಆಹಾರ ಮತ್ತು ನಾಗರಿಕ ವ್ಯವಹಾರ ಸಚಿವ ಕೆ.ಎಚ್‌.ಮುನಿಯಪ್ಪ ಅವರು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪೀಯೂಷ್‌ ಗೋಯಲ್‌ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

2009–10ರಿಂದಲೂ ಕೇಂದ್ರ ಸರ್ಕಾರವು ರಾಜ್ಯದ ಏಜೆನ್ಸಿಗಳ ಹಣವನ್ನು ಪೂರ್ಣ ಪ್ರಮಾಣದಲ್ಲಿ ಪಾವತಿಸಿಲ್ಲ. ಈ  ವಿಳಂಬವು "ರಾಜ್ಯದ ಮೇಲೆ ಅನಗತ್ಯ ಆರ್ಥಿಕ ಹೊರೆಯನ್ನು ಉಂಟುಮಾಡಿದೆ ಎಂದು ಹೇಳಿದ್ದಾರೆ.

ಈ ವರ್ಷ ಹೈಬ್ರಿಡ್‌ ಜೋಳಕ್ಕೆ ಕನಿಷ್ಠ ಬೆಂಬಲ ಬೆಲೆಯನ್ನು ಕ್ವಿಂಟಲ್‌ಗೆ ರೂ.3,180 ಹಾಗೂ ಮಾಲ್ಡಂಡಿ ಜೋಳಕ್ಕೆ ಕ್ವಿಂಟಲ್‌ಗೆ ರೂ.3,225 ನಿಗದಿ ಮಾಡಲಾಗಿದೆ. ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದು, ಮಾಲ್ಡಂಡಿ ಜೋಳಕ್ಕೆ ಕನಿಷ್ಠ ಬೆಂಬಲ ಬೆಲೆಯನ್ನು ರೂ.4,500 ನಿಗದಿ ಮಾಡಬೇಕು. ಈ ಮೂಲಕ ರಾಜ್ಯದ ರೈತರ ನೆರವಿಗೆ ಧಾವಿಸಬೇಕು’ ಎಂದು ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com