ರಾಜ್ಯ

ಕಲಬುರಗಿಯ ಅಫ್ಜಲ್ ಪುರದಲ್ಲಿ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲಿಯೇ ಸಾವು, ಒಬ್ಬರಿಗೆ ಗಾಯ

ಕಲಬುರಗಿಯ ಅಫ್ಜಲ್ ಪುರದಲ್ಲಿ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲಿಯೇ ಸಾವು, ಒಬ್ಬರಿಗೆ ಗಾಯ
ಅಪಘಾತ ನಂತರದ ದೃಶ್ಯ
Published On :

ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಹೊರವಲಯದ ನೀರಾವರಿ ಕಚೇರಿ ಬಳಿ ಕಳೆದ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಲಬುರಗಿ ಕಡೆಯಿಂದ ಹೊರಟಿದ್ದ ಲಾರಿಗೆ ಜೀಪು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. 

ಮೃತರನ್ನು ಸಂತೋಷ್ (40ವ), ಶಂಕರ್ (55ವ), ಸಿದ್ದಮ್ಮ (50ವ), ಹುಚ್ಚಪ್ಪ (5ವ) ಎಂದು ಗುರುತಿಸಲಾಗಿದೆ. ಮೃತರೆಲ್ಲಾರು ಅಫಜಲಪುರ ಮಾಡ್ಯಾಳ ಗ್ರಾಮದ ನಿವಾಸಿಗಳಾಗಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಪೂಜಾ ದೊಡ್ಡಮನಿ (30ವ) ಪ್ರಾಣಾಪಾಯದಿಂದ ಪಾರಾಗಿದ್ದು, ಕಲಬುರಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಫಜಲಪುರ ಕಡೆಯಿಂದ ಮಲ್ಲಾಬಾದ್ ಕಡೆ ಹೊರಟಿದ್ದ ಕಮಾಂಡೋ‌ ಜೀಪ್ ಕಲಬುರಗಿ ಕಡೆಯಿಂದ ಹೊರಟಿದ್ದ ಲಾರಿಗೆ ಡಿಕ್ಕಿ ಹೊಡೆದು ಜೀಪ್​ನಲ್ಲಿದ್ದವರು ಮೃತಪಟ್ಟಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.