ಆಸ್ತಿಗಾಗಿ ಪ್ರಜ್ವಲ್ ಕಾರು ಚಾಲಕನನ್ನು ಕಿಡ್ನಾಪ್ ಮಾಡಿಸಿದ್ರಾ ಭವಾನಿ ರೇವಣ್ಣ? 13 ಎಕರೆ ಭೂಮಿ ಕಿತ್ತುಕೊಂಡ್ರಾ ರೇವಣ್ಣ ಫ್ಯಾಮಿಲಿ?

ಮಾಜಿ ಸಚಿವ ಎಚ್‌.ಡಿ. ರೇವಣ್ಣ‌  ಪತ್ನಿ ಭವಾನಿ ಹಾಗೂ ಸಂಸದ ಪ್ರಜ್ವಲ್‌ ರೇವಣ್ಣ  ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. 14 ವರ್ಷಗಳ ಕಾಲ ಪ್ರಜ್ವಲ್‌ ರೇವಣ್ಣ ಅವರ ಜತೆಗೆ ಕಾರು ಚಾಲಕರಾಗಿದ್ದ ಕಾರ್ತಿಕ್‌ ಎಂಬುವರಿಗೆ ಸೇರಿದ 13 ಎಕರೆ ಜಾಗವನ್ನು ಈ ಕುಟುಂಬ ನುಂಗಿ ಹಾಕಿದೆ ಎಂದು ಆರೋಪಿಸಲಾಗಿದೆ.
ಭವಾನಿ ಮತ್ತು ಪ್ರಜ್ವಲ್ ರೇವಣ್ಣ
ಭವಾನಿ ಮತ್ತು ಪ್ರಜ್ವಲ್ ರೇವಣ್ಣ
Updated on

ಬೆಂಗಳೂರು: ಮಾಜಿ ಸಚಿವ ಎಚ್‌.ಡಿ. ರೇವಣ್ಣ‌  ಪತ್ನಿ ಭವಾನಿ ಹಾಗೂ ಸಂಸದ ಪ್ರಜ್ವಲ್‌ ರೇವಣ್ಣ  ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. 14 ವರ್ಷಗಳ ಕಾಲ ಪ್ರಜ್ವಲ್‌ ರೇವಣ್ಣ ಅವರ ಜತೆಗೆ ಕಾರು ಚಾಲಕರಾಗಿದ್ದ ಕಾರ್ತಿಕ್‌ ಎಂಬುವರಿಗೆ ಸೇರಿದ 13 ಎಕರೆ ಜಾಗವನ್ನು ಈ ಕುಟುಂಬ ನುಂಗಿ ಹಾಕಿದೆ ಎಂದು ಆರೋಪಿಸಲಾಗಿದೆ.

ಆಸ್ತಿ ಮಾರಾಟ ಮಾಡುವಂತೆ ಒತ್ತಾಯಿಸಿ ಮಾಜಿ ಕಾರು ಚಾಲಕನನ್ನು ಕಿಡ್ನಾಪ್ ಮಾಡಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಆರೋಪ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ  ಹಾಗೂ ಇವರ ತಾಯಿ ಭವಾನಿ ರೇವಣ್ಣ  ವಿರುದ್ಧ ಕೇಳಿಬಂದಿದೆ.  ತನಗೆ ನ್ಯಾಯ ನೀಡುವಂತೆ ಚಾಲಕ ಕಾರ್ತಿಕ್ ದಕ್ಷಿಣ ವಲಯ ಐಜಿಪಿಗೆ ದೂರು ನೀಡಿರುವುದು  ತಡವಾಗಿ ಬೆಳಕಿಗೆ ಬಂದಿದೆ.  ಪೊಲೀಸರಿಗೆ ದೂರು ನೀಡಿದರೂ ಸ್ಪಂದಿಸ‌ದಂತೆ ಕುಟುಂಬ ಒತ್ತಡ ಹಾಕುತ್ತಿದೆ ಎಂದು ಹೇಳಲಾಗುತ್ತಿದೆ.

ಕಾರ್ತಿಕ್ ದಶಕಗಳ ಕಾಲ ಪ್ರಜ್ವಲ್ ರೇವಣ್ಣ ಅವರ ಕಾರು ಚಾಲಕನಾಗಿದ್ದರು. ಆದರೆ, ಹೊಳೆನರಸೀಪುರ ತಾಲೂಕಿನಲ್ಲಿರುವ 13 ಎಕರೆ ಭೂಮಿಯನ್ನು ಮಾರಾಟ ಮಾಡುವಂತೆ ಒತ್ತಾಯಿಸಿ ತನ್ನನ್ನು ಹಾಗೂ ತನ್ನ ಪತ್ನಿಯನ್ನು ಕಿಡ್ನಾಪ್ ಮಾಡಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಕಾರ್ತಿಕ್, ಪ್ರಜ್ವಲ್ ರೇವಣ್ಣ ಹಾಗೂ ಭವಾನಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

2023 ರ ಮಾರ್ಚ್ 12 ರಂದು ಕಿಡ್ನಾಪ್ ಮಾಡಿದ್ದು, ಏಪ್ರಿಲ್ ತಿಂಗಳಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಸಹಿತ ಇನ್ನಿತರ ದಾಖಲೆಗಳನ್ನು ಪೊಲೀಸರಿಗೆ ನೀಡಿದ್ದರು. ಬಲವಂತವಾಗಿ ಕರೆದೊಯ್ದು ನನ್ನ 13 ಎಕರೆ ಭೂಮಿಯನ್ನು ಬೇರೆಯವರ ಹೆಸರಿಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಈವರೆಗೆ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆ ನ್ಯಾಯ ಒದಗಿಸಿಕೊಡುವಂತೆ ಮಾಧ್ಯಮದ ಮುಂದೆ ಅಳಲುತೋಡಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com