ಹಾವೇರಿ: ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿದ್ದಕ್ಕಾಗಿ ಪೊಲೀಸ್ ಪೇದೆಗೆ 7 ವರ್ಷ ಜೈಲು ಶಿಕ್ಷೆ, 30 ಸಾವಿರ ರೂ. ದಂಡ

ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದಕ್ಕಾಗಿ ಹಾವೇರಿ ಜಿಲ್ಲೆಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪೊಲೀಸ್ ಪೇದೆ ಸೋಮಶೇಖರ ಭೀಮಪ್ಪ ಕುಂಕುಮಗಾರ ಅವರಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಹಾವೇರಿ: ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದಕ್ಕಾಗಿ ಹಾವೇರಿ ಜಿಲ್ಲೆಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪೊಲೀಸ್ ಪೇದೆ ಸೋಮಶೇಖರ ಭೀಮಪ್ಪ ಕುಂಕುಮಗಾರ ಅವರಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ನಗರ ಸಶಸ್ತ್ರ ಮೀಸಲು (ಸಿಎಆರ್) ಪಡೆಯಲ್ಲಿ ಕೆಲಸ ಮಾಡುತ್ತಿದ್ದ ಕುಂಕುಮಗಾರ, ಹಿರೇಕೆರೂರು ಪಟ್ಟಣದ ಸಮೀಪವಿರುವ ಭೋಗಾವಿ ಗ್ರಾಮದಲ್ಲಿ ವಾಸವಾಗಿದ್ದರು.

ಮೂಲತಃ ಬಲಿಜ ಸಮುದಾಯದ ಕುಂಕುಮಗಾರ ಜಾತಿಗೆ ಸೇರಿದ ಇವರು ಚನ್ನದಾಸರ ಸಮುದಾಯದವರು ಎಂದು ಸುಳ್ಳು ಜಾತಿ ಪತ್ರ ನೀಡಿದ್ದಾರೆ. ಕುಂಕುಮಗಾರ ಅವರು ಪರಿಶಿಷ್ಟ ಜಾತಿಗೆ ಸೇರಿದವರು ಎಂಬ ಪ್ರಮಾಣಪತ್ರವನ್ನು ಪಡೆಯಲು, ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳು ಮತ್ತು ಇತರ ದಾಖಲೆಗಳನ್ನು ಹಿರೇಕೆರೂರಿನಲ್ಲಿ ತಹಸೀಲ್ದಾರ್ ಅವರಿಗೆ ಸಲ್ಲಿಸಿದ್ದರು.

ಭೋಗಾವಿ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಹನುಮಂತಪ್ಪ ತಳವಾರ ಈ ವಂಚನೆಗೆ ಸಹಕರಿಸಿದ್ದಾರೆ.
ಅಪರಾಧಿಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಗರ ಸಶಸ್ತ್ರ ಮೀಸಲು ಪಡೆಯಲ್ಲಿ ಯಶಸ್ವಿಯಾಗಿ ಸ್ಥಾನ ಪಡೆದಿದ್ದಾರೆ. ಜಿಲ್ಲಾಧಿಕಾರಿ ನಡೆಸಿದ ತನಿಖೆ ಮತ್ತು ವಿಶೇಷ ಸಮಿತಿಯು ಅವರ ವಿರುದ್ಧದ ಆರೋಪಗಳನ್ನು ಪರಿಶೀಲಿಸಿತು. ನಂತರ ಅವರ ವಿರುದ್ಧ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ನ್ಯಾಯಾಧೀಶ ಜಿಎಲ್ ಲಕ್ಷ್ಮೀನಾರಾಯಣ ಅವರು ಬುಧವಾರ ತೀರ್ಪು ಪ್ರಕಟಿಸಿದ್ದು, ಆರೋಪಿಗೆ ಏಳು ವರ್ಷ ಜೈಲು ಶಿಕ್ಷೆ ಹಾಗೂ 30 ಸಾವಿರ ರೂ. ದಂಡ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕಿ ಸರೋಜಾ ಜಿ. ಕೂಡಲಗಿಮಠ ಅವರು ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com