ಬೆಂಗಳೂರು: ಜಗಳದ ವೇಳೆ ಚಾಕುವಿನಿಂದ ಇರಿದು ಗಂಡನ ಕೊಲೆ ಮಾಡಿದ ಪತ್ನಿಯ ಬಂಧನ

ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ನಿಯೊಬ್ಬರು ತಮ್ಮ ಗಂಡನ ಎದೆಗೆ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಗುರುವಾರ ವರದಿಯಾಗಿದೆ. ಮೃತ ವ್ಯಕ್ತಿಯನ್ನು 27 ವರ್ಷದ ಉಮೇಶ್ ದಾಮಿ ಎಂದು ಗುರುತಿಸಲಾಗಿದ್ದು, ಆರೋಪಿ ಪತ್ನಿ ಮನೀಶಾ ದಾಮಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಬೆಂಗಳೂರು: ನಗರದ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ನಿಯೊಬ್ಬರು ತಮ್ಮ ಗಂಡನ ಎದೆಗೆ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಗುರುವಾರ ವರದಿಯಾಗಿದೆ.

ಮೃತ ವ್ಯಕ್ತಿಯನ್ನು 27 ವರ್ಷದ ಉಮೇಶ್ ದಾಮಿ ಎಂದು ಗುರುತಿಸಲಾಗಿದ್ದು, ಅವರು ಖಾಸಗಿ ಕಾಲೇಜಿನ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತ್ನಿ ಮನೀಶಾ ದಾಮಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ಆರೋಪಿ ತನ್ನ ಪತಿ ಕೆಲಸ ಮಾಡುತ್ತಿದ್ದ ಕಾಲೇಜಿನಲ್ಲಿಯೇ ಹೌಸ್‌ ಕೀಪಿಂಗ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಉಮೇಶ್ ತನ್ನ ಸ್ನೇಹಿತರೊಂದಿಗೆ ಪಾರ್ಟಿಗೆಂದು ಹೊರಗೆ ಹೋಗಿದ್ದು, ಮಧ್ಯರಾತ್ರಿ ಮನೆಗೆ ಹಿಂತಿರುಗಿದಾಗ, ತನ್ನ ಹೆಂಡತಿ ಫೋನಿನಲ್ಲಿ ಮಾತನಾಡುತ್ತಿರುವುದು ಕಂಡುಬಂದಿದೆ.

ಈ ವಿಚಾರವಾಗಿ ಸಂತ್ರಸ್ತ ಆಕೆಯೊಂದಿಗೆ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ ಜಗಳವಾಡಿದ್ದಾರೆ. ಜಗಳದ ವೇಳೆ ಕೋಪದ ಭರದಲ್ಲಿ ಆಕೆಯು ಗಂಡನ ಎದೆಗೆ ಚಾಕುವಿನಿಂದ ಇರಿದಿದ್ದಾಳೆ. ತೀವ್ರ ರಕ್ತಸ್ರಾವವಾಗಿ ಆತ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹುಳಿಮಾವು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com