ದೇವಸ್ಥಾನ ಒಡೆದು ಕಟ್ಟಿದ ಒಂದೇ ಒಂದು ಮಸೀದಿಯನ್ನೂ ಉಳಿಸುವುದಿಲ್ಲ: ಹಿಂದು ರಾಷ್ಟ್ರ ಹಿಂದುಗಳ ಅಜೆಂಡಾ!

ದೇಶದಲ್ಲಿ ಅದೆಷ್ಟೋ ದೇವಸ್ಥಾನಗಳನ್ನು ಕೆಡವಿ ಮಸೀದಿ ಕಟ್ಟಿದ್ದಾರೆ ಈ ರೀತಿ ನಿರ್ಮಿಸಿದ ಯಾವುದೇ ಒಂದು ಮಸೀದಿಯನ್ನೂ ಈ ದೇಶದಲ್ಲಿ ಉಳಿಸುವುದಿಲ್ಲ ಎಂದು ಬಿಜೆಪಿ  ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಕೆ.ಎಸ್ ಈಶ್ವರಪ್ಪ
ಕೆ.ಎಸ್ ಈಶ್ವರಪ್ಪ

ಗದಗ: ದೇಶದಲ್ಲಿ ಅದೆಷ್ಟೋ ದೇವಸ್ಥಾನಗಳನ್ನು ಕೆಡವಿ ಮಸೀದಿ ಕಟ್ಟಿದ್ದಾರೆ ಈ ರೀತಿ ನಿರ್ಮಿಸಿದ ಯಾವುದೇ ಒಂದು ಮಸೀದಿಯನ್ನೂ ಈ ದೇಶದಲ್ಲಿ ಉಳಿಸುವುದಿಲ್ಲ ಎಂದು ಬಿಜೆಪಿ  ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಗದಗದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕಟ್ಟಲಾದ ಹೊಸ ಮಸೀದಿಗಳ ಬಗ್ಗೆ ನಾನು ವಿರೋಧ ಮಾಡುವುದಿಲ್ಲ. ಆದರೆ, ನಮ್ಮ ದೇವಸ್ಥಾನಗಳನ್ನು ಒಡೆದು ಮಸೀದಿ ಕಟ್ಟಿದ್ದಾರಲ್ಲ ಆ ಮಸೀದಿಗಳನ್ನು ಉಳಿಸುವುದಿಲ್ಲ. ಈ ದೇಶದಲ್ಲಿ ಒಂದೇ ಒಂದು ಮಸೀದಿಯನ್ನು ಉಳಿಸುವುದಿಲ್ಲ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿದರು.

ಕಾಶಿ ಕುರಿತು ಕೋರ್ಟ್ ಆಡರ್ ಆಗಿದೆ. ಮಧುರಾ ಬಗ್ಗೆ ಸರ್ವೇ ಕೊಟ್ಟಿದ್ದಾರೆ. ದೇಶದಲ್ಲಿ ಹೊಸ ಮಸೀದಿಗಳ ಬಗ್ಗೆ ನಾನು ವಿರೋಧ ಮಾಡುವುದಿಲ್ಲ. ನಮ್ಮ ದೇವಸ್ಥಾನಗಳನ್ನು ಹೊಡೆದು ಮಸೀದಿ ಕಟ್ಟಿದ್ದಾರಲ್ಲ ಆ ಮಸೀದಿ ಉಳಿಸಲ್ಲ. ಈ ದೇಶದಲ್ಲಿ ಒಂದೇ ಒಂದು ಮಸೀದಿಯನ್ನು ಉಳಿಸುವುದಿಲ್ಲ. ಇದು ನನ್ನ ವೈಯಕ್ತಿಕವಾದ ಅಭಿಪ್ರಾಯ ಎಂದು ಹೇಳಿದರು.

ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ರಕ್ತವನ್ನು ಹಂಚಿಕೊಂಡವರು ನಾವು. ನಮ್ಮಲ್ಲಿ ಟಿಪ್ಪು ರಕ್ತ ಇಲ್ಲ. ಅಯೋಧ್ಯೆ, ಕಾಶಿ ಮಧುರಾ, ಇಂತಹ ವಿಶೇಷ ದೇವಸ್ಥಾನಗಳನ್ನು ನಾವು ಉಳಿಸುತ್ತೇವೆ ಎಂದು ಅವರು ಒತ್ತಿ ಹೇಳಿದರು.

ದೇಶದ ಹಿಂದೂಗಳು ಹಿಂದೂ ರಾಷ್ಟ್ರ ಆಗಬೇಕು ಎಂದು ನಿರ್ಧಾರ ಮಾಡಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟಬೇಕು ಎನ್ನುವುದು ಇವತ್ತಿನ ತೀರ್ಮಾನ ಅಲ್ಲ. ಸ್ವಾತಂತ್ರ್ಯ ಪೂರ್ವದಿಂದ ಆದ ಹೋರಾಟ’ ಎಂದು ಅವರು ಹೇಳಿದರು.

ಬಿಜೆಪಿಯಿಂದ ಈ ದೇಶವನ್ನು ಹಿಂದು ರಾಷ್ಟ್ರ ಮಾಡಲು ಸಾಧ್ಯವಿಲ್ಲ. ಇದು ಜಾತ್ಯತೀತ ರಾಷ್ಟ್ರ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದ ಅವರು, ಹಿಂದೂ ರಾಷ್ಟ್ರ ಮಾಡೋದು ಬಿಜೆಪಿ ಅಜೆಂಡಾ ಅಲ್ಲ. ಹಿಂದೂ ರಾಷ್ಟ್ರ ಮಾಡೋದು ದೇಶದ ಹಿಂದೂಗಳ ಅಜೆಂಡಾ ಎಂದರು. ಈಗಲೂ ನಾನು ಹೇಳ್ತೇನೆ. ಭಾರತ ಹಿಂದೂ ರಾಷ್ಟ್ರ ಆಗಿಯೇ ಆಗುತ್ತದೆ ಎಂದರು.

ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟಬೇಕು ಎನ್ನುವುದು ಇವತ್ತಿನ ತೀರ್ಮಾನ ಅಲ್ಲ. ಇದರ ಬಗ್ಗೆ ಸ್ವಾತಂತ್ರ್ಯ ಪೂರ್ವದಿಂದಲೇ ಹೋರಾಟ ನಡೆದುಕೊಂಡು ಬಂದಿದೆ. ಮಥುರಾ, ಕಾಶಿಯಲ್ಲಿ ಎಲ್ಲವನ್ನೂ ಹೊಡೆದು ಹಾಕಿದ್ರಲ್ವಾ ಮುಸಲ್ಮಾನರು. ಅದನ್ನೆಲ್ಲಾ ಉಳಿಸಬೇಕೆಂಬ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಅದೆಷ್ಟೋ ಮಂದಿ ಸ್ವರ್ಗದಲ್ಲಿದ್ದಾರೆ. ಅವರೆಲ್ಲ ಆತ್ಮಕ್ಕೆ ಈಗ ಶಾಂತಿ ಸಿಗುತ್ತಿದೆ ಎಂದು ಈಶ್ವರಪ್ಪ ನುಡಿದರು.

ಜನವರಿ 22ಕ್ಕೆ ಅಯೋಧ್ಯೆಯಲ್ಲಿ ಇಡೀ ಪ್ರಪಂಚ ನೋಡುವ ಕೆಲಸ ಆಗಲಿದೆ. ಕಾಶಿ ವಿಶ್ವನಾಥ ದೇವಸ್ಥಾನದ ವಿಚಾರದಲ್ಲಿ ನಡೆಯುತ್ತಿರುವ ಕೋರ್ಟ್‌ ವಿಚಾರಣೆ ಹಿಂದುಗಳ ಪರವಾಗಿ ನಡೆಯುತ್ತಿದೆ. ಮಥುರೆಯ ಕೃಷ್ಣ ದೇವಸ್ಥಾನದ ವಿಚಾರದಲ್ಲಿ ಸರ್ವೇಗೆ ಆದೇಶ ಕೊಟ್ಟಿದ್ದಾರೆ. ಎಲ್ಲವೂ ಒಂದೊಂದಾಗಿ ನಡೆಯಲಿದೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com