ಅವ್ಯವಹಾರ ಮತ್ತು ಅಕ್ರಮ ಆರೋಪ: 10 ಸರ್ಕಾರಿ ಆಸ್ಪತ್ರೆಗಳ ಮೇಲೆ ಲೋಕಾಯುಕ್ತ ದಾಳಿ

ಅವ್ಯವಹಾರ ಹಾಗೂ ಅಕ್ರಮ ನಡೆದಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿನ ಹತ್ತು ಸರ್ಕಾರಿ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದ್ದಾರೆ.
ಕರ್ನಾಟಕ ಲೋಕಾಯುಕ್ತ
ಕರ್ನಾಟಕ ಲೋಕಾಯುಕ್ತ

ಬೆಂಗಳೂರು: ಅವ್ಯವಹಾರ ಹಾಗೂ ಅಕ್ರಮ ನಡೆದಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿನ ಹತ್ತು ಸರ್ಕಾರಿ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದ್ದಾರೆ.

ನೆಲಮಂಗಲ, ಯಲಹಂಕ, ಕೆಆರ್ ಪುರಂ, ಜಯನಗರ, ಕೆಸಿ ಜನರಲ್ ಆಸ್ಪತ್ರೆ, ಸಂಜಯ್ ಗಾಂಧಿ ಆಸ್ಪತ್ರೆ, ಇಂದಿರಾಗಾಂಧಿ ಆಸ್ಪತ್ರೆ, ರಾಜೀವ್ ಗಾಂಧಿ ಆಸ್ಪತ್ರೆ, ಗೌಸಿಯಾ ಆಸ್ಪತ್ರೆ, ವಾಣಿ ವಿಲಾಸ ಆಸ್ಪತ್ರೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

ಪೊಲೀಸ್ ಮಹಾನಿರ್ದೇಶಕ (ಲೋಕಾಯುಕ್ತ) ಪ್ರಶಾಂತ್ ಕುಮಾರ್ ಠಾಕೂರ್ ಅವರು ಕೆಸಿ ಜನರಲ್ ಆಸ್ಪತ್ರೆ ಮತ್ತು ಯಲಹಂಕ ಸಾರ್ವಜನಿಕ ಆಸ್ಪತ್ರೆಯನ್ನು ಪರಿಶೀಲಿಸಿದರು. ಪೊಲೀಸ್ ಮಹಾನಿರೀಕ್ಷಕ ಡಾ. ಎ ಸುಬ್ರಹ್ಮಣ್ಯೇಶ್ವರ ರಾವ್ ಅವರು ಸಂಜಯ್ ಗಾಂಧಿ ಆಸ್ಪತ್ರೆ ಮತ್ತು ವಾಣಿ ವಿಲಾಸ ಆಸ್ಪತ್ರೆಗೆ ಭೇಟಿ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com