ಸಕ್ಕರೆ ಉದ್ಯಮದಿಂದ ರಾಜ್ಯಕ್ಕೆ 25 ಸಾವಿರ ಕೋಟಿ ರೂ. ಆದಾಯ: ಸಚಿವ ಶಿವಾನಂದ ಪಾಟೀಲ್

ಭವಿಷ್ಯದಲ್ಲಿ ಇಡೀ ದೇಶದಲ್ಲಿಯೇ ಸಕ್ಕರೆ ಉದ್ಯಮ ಅಭಿವೃದ್ಧಿ ಹೊಂದಲಿದೆ ಎಂದ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು, ಈ ಉದ್ಯಮದಿಂದ ರಾಜ್ಯ ಸರ್ಕಾರಕ್ಕೆ 25-35 ಸಾವಿರ ಕೋಟಿ ರೂ. ಆದಾಯ ಬರುತ್ತಿದೆ ಎಂದು ತಿಳಿಸಿದರು.
ಸಚಿವ ಶಿವಾನಂದ ಪಾಟೀಲ್
ಸಚಿವ ಶಿವಾನಂದ ಪಾಟೀಲ್

ಬೆಳಗಾವಿ: ಭವಿಷ್ಯದಲ್ಲಿ ಇಡೀ ದೇಶದಲ್ಲಿಯೇ ಸಕ್ಕರೆ ಉದ್ಯಮ ಅಭಿವೃದ್ಧಿ ಹೊಂದಲಿದೆ ಎಂದ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು, ಈ ಉದ್ಯಮದಿಂದ ರಾಜ್ಯ ಸರ್ಕಾರಕ್ಕೆ 25-35 ಸಾವಿರ ಕೋಟಿ ರೂ. ಆದಾಯ ಬರುತ್ತಿದೆ ಎಂದು ತಿಳಿಸಿದರು.

ಶುಕ್ರವಾರ ಬೆಳಗಾವಿಯಲ್ಲಿ ಎಸ್ ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಸಕ್ಕರೆ ಕಾರ್ಖಾನೆಗಳಿಗೆ ಪ್ರಶಸ್ತಿ ವಿತರಿಸಿ ಮಾತನಾಡಿದ ಸಚಿವರು, ಜಾಗತಿಕ ವೈಜ್ಞಾನಿಕ ಕ್ರಾಂತಿಯಲ್ಲಿ ಈ ಕ್ಷೇತ್ರವು ಪ್ರಮುಖ ಪಾತ್ರ ವಹಿಸಿದೆ. "ಭಾರತದ ಸಕ್ಕರೆ ಉದ್ಯಮದಿಂದ ಹೆಚ್ಚಿನ ಸಂಖ್ಯೆಯ ಜನ ಉದ್ಯೋಗಗಳನ್ನು ಪಡೆಯಲು ಸಾಧ್ಯವಾಯಿತು" ಎಂದು ಹೇಳಿದರು.

ಸಕ್ಕರೆ ಕಾರ್ಖಾನೆಗಳು ರಾಜ್ಯದ ರೈತರ ಹಿತಾಸಕ್ತಿ ಕಾಪಾಡಬೇಕು ಎಂದು ಸಲಹೆ ನೀಡಿದ ಪಾಟೀಲ್, ಹಿಂದೆ ದೇಶ ಸಕ್ಕರೆಯನ್ನು ಆಮದು ಮಾಡಿಕೊಳ್ಳಬೇಕಾಗಿದ್ದ ಸಮಯವನ್ನು ಅವರು ನೆನಪಿಸಿಕೊಂಡರು. ಆದರೆ ಇಂದು, ಕಬ್ಬು ದೇಶದ ಆರ್ಥಿಕತೆಗೆ ಹೆಚ್ಚು ಕೊಡುಗೆ ನೀಡಿದ ಪ್ರಮುಖ ಬೆಳೆಯಾಗಿದೆ. ಪ್ರಸ್ತುತ ದೇಶದಲ್ಲಿ ಕಬ್ಬು ಬೆಳೆಯುವ ವಿಷಯದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದು, ಅಗ್ರಸ್ಥಾನ ಪಡೆಯಲು ಸಜ್ಜಾಗಿದೆ ಎಂದರು.

ರೈತರಿಗೆ ಉತ್ತಮ ಲಾಭಾಂಶವನ್ನು ನೀಡುವ ಏಕೈಕ ಬೆಳೆ ಕಬ್ಬು. ಸಾಂಪ್ರದಾಯಿಕ ಕೃಷಿ ತಂತ್ರಗಳನ್ನು ಅಭ್ಯಾಸ ಮಾಡುವುದರ ಜೊತೆಗೆ ಇಳುವರಿಯನ್ನು ಸುಧಾರಿಸಲು ವಿವಿಧ ಆಧುನಿಕ ವೈಜ್ಞಾನಿಕ ಕೃಷಿ ತಂತ್ರಜ್ಞಾನಗಳನ್ನು ಅನ್ವೇಷಿಸಬೇಕು ಎಂದರು.

ಇದಕ್ಕೂ ಮುನ್ನ ಬಾಗಲಕೋಟೆಯ ಸಮೀರವಾಡಿ ಗೋದಾವರಿ ಸಕ್ಕರೆ ಕಾರ್ಖಾನೆ ಹಾಗೂ ನಿಪ್ಪಾಣಿಯ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆಗೆ ತಾಂತ್ರಿಕ ಶಿಸ್ತಿನ ಸಾಧನೆಗಾಗಿ ಸಚಿವರು ಪ್ರಶಸ್ತಿ ಪ್ರದಾನ ಮಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com