ಶಾಲೆಗಳ ಶೌಚಾಲಯ ಶುಚಿಗೊಳಿಸಲು ಸಿಬ್ಬಂದಿ ನೇಮಕ ಬಗ್ಗೆ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ

ಶಾಲೆಯ ಶೌಚಾಲಯಗಳನ್ನು ಶುಚಿಗೊಳಿಸಲು ವಿದ್ಯಾರ್ಥಿಗಳನ್ನು ಬಳಸುವುದು ಅತ್ಯಂತ ಹೀನ ಕೃತ್ಯ. ಇತ್ತೀಚೆಗೆ ಇಂತಹ ಪ್ರಕರಣಗಳು ವರದಿಯಾಗುತ್ತಿದ್ದು ಇದನ್ನು ಸಹಿಸಲು ಸಾಧ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಶಾಲೆಯ ಶೌಚಾಲಯಗಳನ್ನು ಶುಚಿಗೊಳಿಸಲು ವಿದ್ಯಾರ್ಥಿಗಳನ್ನು ಬಳಸುವುದು ಅತ್ಯಂತ ಹೀನ ಕೃತ್ಯ. ಇತ್ತೀಚೆಗೆ ಇಂತಹ ಪ್ರಕರಣಗಳು ವರದಿಯಾಗುತ್ತಿದ್ದು ಇದನ್ನು ಸಹಿಸಲು ಸಾಧ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು, “ಈಗಾಗಲೇ ವರದಿಯಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಪ್ಪಿತಸ್ಥ ಶಿಕ್ಷಕರ ವಿರುದ್ಧ ಸೂಕ್ತ ಕ್ರಮಕೈಗೊಂಡಿದ್ದಾರೆ. ಇಂತಹ ಕೃತ್ಯಗಳು ಬೇರೆ ಶಾಲೆಗಳಲ್ಲಿ ನಡೆಯುತ್ತಿದ್ದರೆ ಅವುಗಳನ್ನು ಪತ್ತೆಹಚ್ಚಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಪ್ರಾಥಮಿಕ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದೇನೆ. ಶಾಲೆ-ಕಾಲೇಜುಗಳ ಹಾಸ್ಟೆಲ್‌ಗಳಲ್ಲಿಯೂ ಈ ಬಗ್ಗೆ ನಿಗಾವಹಿಸುವಂತೆ ಸಮಾಜ ಕಲ್ಯಾಣ ಸಚಿವರಿಗೂ ತಿಳಿಸಿದ್ದೇನೆ” ಎಂದು ಹೇಳಿದ್ದಾರೆ.

“ಪ್ರತಿಯೊಂದು ಶಾಲೆಯಲ್ಲಿಯೂ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಇರಬೇಕು ಮತ್ತು ಅವುಗಳನ್ನು ಪ್ರತಿದಿನ ಶುಚಿಗೊಳಿಸಲು ಸಿಬ್ಬಂದಿಯನ್ನು ನೇಮಕ ಮಾಡಬೇಕು. ಈ ಬಗ್ಗೆ ಒಂದು ಸಮೀಕ್ಷೆ ನಡೆಸಿ ಜಿಲ್ಲಾ ಶಿಕ್ಷಣಾಧಿಕಾರಿಗಳಿಂದ ವರದಿ ತರಿಸುವಂತೆ ಪ್ರಾಥಮಿಕ ಶಿಕ್ಷಣ ಸಚಿವರಿಗೆ ತಿಳಿಸಿದ್ದೇನೆ” ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com