ಕಾಂಗ್ರೆಸ್ ಪ್ರಣಾಳಿಕೆ ಸಮಿತಿಯಲ್ಲಿ ಸಿದ್ದರಾಮಯ್ಯಗೆ ಸ್ಥಾನ; ಪಕ್ಷದ ಹೈಕಮಾಂಡ್‌ಗೆ ಸಿಎಂ ಕೃತಜ್ಞತೆ

ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಸದಸ್ಯರನ್ನಾಗಿ ನೇಮಿಸಿದ್ದಕ್ಕಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಪಕ್ಷದ ಪ್ರಣಾಳಿಕೆ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಿದ್ದಕ್ಕಾಗಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಧ್ಯಕ್ಷರಿಗೆ ಶನಿವಾರ ಕೃತಜ್ಞತೆ ಸಲ್ಲಿಸಿದರು.

ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಸದಸ್ಯರನ್ನಾಗಿ ನೇಮಿಸಿದ್ದಕ್ಕಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

'ಕರ್ನಾಟಕ ಮಾದರಿ ಆಡಳಿತವನ್ನು ದೇಶ ಗುರುತಿಸುತ್ತದೆ. ಇಂದು, ದೇಶದಾದ್ಯಂತ ಜನರು ನಮ್ಮ ಸರ್ಕಾರದ 'ಕರ್ನಾಟಕ ಮಾದರಿ' ಆಡಳಿತವನ್ನು ಪಕ್ಷಾತೀತ ಮಾನದಂಡವೆಂದು ಗುರುತಿಸಿದ್ದಾರೆ. ಪ್ರಣಾಳಿಕೆಯ ಕರಡು ರಚನೆಯಲ್ಲಿ ಅವಕಾಶ ನೀಡಿರುವುದು ಈ 'ಕರ್ನಾಟಕ ಮಾದರಿ ಆಡಳಿತಕ್ಕೆ ಮಾನ್ಯತೆ ಎಂದು ನಾನು ಭಾವಿಸುತ್ತೇನೆ' ಎಂದು ಅವರು ವಿವರಿಸಿದರು.

ಪಕ್ಷದ ಪ್ರಣಾಳಿಕೆ ಪ್ರಕಾರ, ಇದು ಕೇವಲ ಮತದಾರರಿಗೆ ನೀಡಿದ ಭರವಸೆಗಳ ಪಟ್ಟಿಯಲ್ಲ. ಇದು ನಾವು ಜನರಿಗೆ ಮಾಡುವ ಬದ್ಧತೆಯಾಗಿದೆ ಮತ್ತು ಅದನ್ನು ಅನುಷ್ಠಾನಗೊಳಿಸುವುದು ಆಡಳಿತದ ನಿಜವಾದ ಸಾರವಾಗಿದೆ ಎಂದು ಅವರು ಹೇಳಿದರು.

‘ನಮ್ಮ ಹಿಂದಿನ ಸರ್ಕಾರ (2013) ಪ್ರಣಾಳಿಕೆಯಲ್ಲಿನ ಶೇ 95ಕ್ಕೂ ಹೆಚ್ಚು ಭರವಸೆಗಳನ್ನು ಜಾರಿಗೆ ತಂದು ಸಮಾನ ಅವಕಾಶ ಹಾಗೂ ಸಮತೋಲಿತ ಅಭಿವೃದ್ಧಿ ಒದಗಿಸಿ ಜನರ ವಿಶ್ವಾಸ ಗಳಿಸಿತ್ತು. ಈಗಿನ ಸರ್ಕಾರ ಕೂಡ ಅದೇ ಹಾದಿಯಲ್ಲಿ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ದೇಶದ ಜನತೆಗೂ ಕರ್ನಾಟಕ ಮಾದರಿ ಆಡಳಿತದ ಅನುಕೂಲ ಸಿಗಲಿದೆ ಎಂದು ಆಶಿಸುತ್ತೇನೆ' ಎಂದು ಸಿದ್ದರಾಮಯ್ಯ ಹೇಳಿದರು.

'ನನ್ನೆಲ್ಲಾ ಕಲ್ಯಾಣ ಮತ್ತು ಮೂಲಸೌಕರ್ಯ ಉಪಕ್ರಮಗಳಿಗೆ ಬೆಂಬಲ ನೀಡಿದ ಪಕ್ಷದ ಹಿರಿಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ನಾನು ಕೃತಜ್ಞನಾಗಿದ್ದೇನೆ' ಎಂದು ಮುಖ್ಯಮಂತ್ರಿ ಹೇಳಿದರು.

2024ರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆ ಸಮಿತಿಯನ್ನು ಶುಕ್ರವಾರ ರಚಿಸಿದೆ ಮತ್ತು ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅವರನ್ನು ಅದರ ಅಧ್ಯಕ್ಷರನ್ನಾಗಿ ನೇಮಿಸಿದೆ. 16 ಸದಸ್ಯರ ಸಮಿತಿಯಲ್ಲಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಇದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com