ರಾಜ್ಯದಲ್ಲಿ ಇಂದು 106 ಜನರಿಗೆ ಕೊರೋನಾ ಪಾಸಿಟಿವ್; ಪ್ರಕರಣಗಳ ಸಂಖ್ಯೆ 344ಕ್ಕೆ ಏರಿಕೆ!

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಭಾನುವಾರ ಒಂದೇ ದಿನ 106 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 344ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಭಾನುವಾರ ಒಂದೇ ದಿನ 106 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 344ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 106 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4,089,462ಕ್ಕೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 344ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೊರೊನಾ ಪಾಸಿಟಿವಿ ರೇಟ್ ಶೇಕಡಾ 7.35ರಷ್ಟಿದೆ  ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ತಿಳಿಸಿದೆ.

ಬೆಂಗಳೂರಿನಲ್ಲಿಯೇ ಬರೊಬ್ಬರಿ 95 ಜನರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಇದರೊಂದಿಗೆ ರಾಜಧಾನಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 329ಕ್ಕೆ ಏರಿಕೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com