2024ರ ಏಪ್ರಿಲ್ 20, 21 ರಂದು ಸಿಇಟಿ ಪರೀಕ್ಷೆ- ಕೆಇಎ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇಂಜಿನಿಯರಿಂಗ್, ಫಾರ್ಮಸಿ, ಪಶುವೈದ್ಯಕೀಯ ವಿಜ್ಞಾನ ಮತ್ತು ಕೃಷಿಯಂತಹ ಕೋರ್ಸ್‌ಗಳಿಗೆ 2024 ರ ಏಪ್ರಿಲ್ 20 ಮತ್ತು 21 ರಂದು ಸಿಇಟಿ ಪರೀಕ್ಷೆ ನಡೆಸಲು ಸಜ್ಜಾಗಿದೆ. ಮುಂದಿನ ವರ್ಷದ ಜನವರಿ 10 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಎಸ್ ಶುಕ್ರವಾರ ತಿಳಿಸಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇಂಜಿನಿಯರಿಂಗ್, ಫಾರ್ಮಸಿ, ಪಶುವೈದ್ಯಕೀಯ ವಿಜ್ಞಾನ ಮತ್ತು ಕೃಷಿಯಂತಹ ಕೋರ್ಸ್‌ಗಳಿಗೆ 2024 ರ ಏಪ್ರಿಲ್ 20 ಮತ್ತು 21 ರಂದು ಸಿಇಟಿ ಪರೀಕ್ಷೆ ನಡೆಸಲು ಸಜ್ಜಾಗಿದೆ. ಮುಂದಿನ ವರ್ಷದ ಜನವರಿ 10 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಎಸ್ ಶುಕ್ರವಾರ ತಿಳಿಸಿದ್ದಾರೆ. 

ಮೊದಲ ಬಾರಿಗೆ, ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಸೇರಿದಂತೆ ಎಲ್ಲಾ ವೃತ್ತಿಪರ ಕೋರ್ಸ್‌ಗಳಿಗೆ ಪರೀಕ್ಷೆ ಮತ್ತು ಕೌನ್ಸೆಲಿಂಗ್‌ಗೆ ಸಾಮಾನ್ಯ ಅರ್ಜಿ ಇದೆ. ಆನ್‌ಲೈನ್ ಅರ್ಜಿಯನ್ನು ಭರ್ತಿ ಮಾಡುವಾಗ ಅಭ್ಯರ್ಥಿಗಳು ತಮ್ಮ ಸರಿಯಾದ ಆರ್‌ಡಿ (ಕಂದಾಯ ದಾಖಲೆಗಳು) ಸಂಖ್ಯೆಯನ್ನು ನಮೂದಿಸಲು ಸೂಚಿಸಲಾಗಿದೆ.  ಇದನ್ನು ಮಾಡದಿದ್ದರೆ ಪ್ರಕ್ರಿಯೆಯು ಅಪೂರ್ಣವಾಗಿರುತ್ತದೆ. ಅಭ್ಯರ್ಥಿಯು ಆರ್‌ಡಿ ಸಂಖ್ಯೆ ಹೊಂದಿರುವ ಜಾತಿ ಪ್ರಮಾಣಪತ್ರ ಹೊಂದಿರಬೇಕು, ಇಲ್ಲದಿದ್ದರೆ ಅವರು ಜಾತಿ ಮೀಸಲಾತಿಗೆ ಅರ್ಹರಾಗಿರುವುದಿಲ್ಲ.

ಆರ್ಕಿಟೆಕ್ಚರ್, ಬಿಪಿಟಿ, ಬಿಎಸ್ಸಿ ಅಲೈಡ್ ಹೆಲ್ತ್ ಸೈನ್ಸಸ್, ಮತ್ತು ಬಿಪಿಒ ಕೋರ್ಸ್‌ಗಳ ಆಕಾಂಕ್ಷಿ ವಿದ್ಯಾರ್ಥಿಗಳು ಸಹ ತಮ್ಮ ಅರ್ಜಿಗಳನ್ನು ಸಹ ಭರ್ತಿ ಮಾಡಬೇಕು. ಹೆಚ್ಚಿನ ಪ್ರಶ್ನೆಗಳಿಗೆ keaugcet2024@gmail.com ಗೆ ಮೇಲ್ ಮಾಡಬಹುದು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com