ದತ್ತ ಜಯಂತಿ ಶೋಭಾ ಯಾತ್ರೆ: ಕಾರ್ಯಕರ್ತರೊಂದಿಗೆ ಶೋಭಾ ಕರಂದ್ಲಾಜೆ, ಸಿಟಿ ರವಿ ಹೆಜ್ಜೆ! ವಿಡಿಯೋ

ಜಿಲ್ಲೆಯ ಹಲವೆಡೆ ಅದ್ಧೂರಿಯಾಗಿ ದತ್ತ ಜಯಂತಿ ಆಚರಣೆ ಮಾಡಲಾಗುತ್ತಿದೆ. ತಾಲೂಕಿನ  ಆಲ್ದೂರಿನಲ್ಲಿ ಶನಿವಾರ ನಡೆದ ಶೋಭಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ  ಮತ್ತು ಮಾಜಿ ಸಚಿವ ಸಿ.ಟಿ. ರವಿ ಕಾರ್ಯಕರ್ತರೊಂದಿಗೆ ಕುಣಿದು ಕುಪ್ಪಳಿಸಿದ್ದಾರೆ. 
ಹೆಜ್ಜೆ ಹಾಕಿದ ಶೋಭಾ ಕರಂದ್ಲಾಜೆ
ಹೆಜ್ಜೆ ಹಾಕಿದ ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು: ಜಿಲ್ಲೆಯ ಹಲವೆಡೆ ಅದ್ಧೂರಿಯಾಗಿ ದತ್ತ ಜಯಂತಿ ಆಚರಣೆ ಮಾಡಲಾಗುತ್ತಿದೆ. ತಾಲೂಕಿನ  ಆಲ್ದೂರಿನಲ್ಲಿ ಶನಿವಾರ ನಡೆದ ಶೋಭಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ  ಮತ್ತು ಮಾಜಿ ಸಚಿವ ಸಿ.ಟಿ. ರವಿ ಕಾರ್ಯಕರ್ತರೊಂದಿಗೆ ಕುಣಿದು ಕುಪ್ಪಳಿಸಿದ್ದಾರೆ. 

ಕೈಯಲ್ಲಿ ಭಗವಾ ಧ್ವಜ ಹಿಡಿದು ಸಾವಿರಾರರು  ಕಾರ್ಯಕರ್ತರು, ದತ್ತ ಮಾಲಾಧಾರಿಗಳೊಂದಿಗೆ ಡಿಜೆ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ರಸ್ತೆಯುದ್ಧಕ್ಕೂ  ಜೈ ಶ್ರೀರಾಮ್ ಹಾಗೂ ದತ್ತಾತ್ರೇಯ ಎಂಬ ಘೋಷಣೆ ಮೊಳಗಿದವು. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು. 

ಇಂದು  ಚಿಕ್ಕಮಗಳೂರು ನಗರದ ಪ್ರಮುಖ ಬೀದಿಗಳಲ್ಲಿ ಮಹಿಳೆಯರಿಂದ ಅನಸೂಯ ಜಯಂತಿ ಆಚರಣೆ ಮಾಡುವುದರ ಮೂಲಕ ಸಂಕೀರ್ತನೆ ಯಾತ್ರೆ ನಡೆಯಲಿದೆ. ನಾಳೆ ನಗರದಲ್ಲಿ ಬೃಹತ್ ಶೋಭಾಯತ್ರೆ ನಡೆಯಲಿದೆ. ಈ ಶೋಭಾಯಾತ್ರೆಯಲ್ಲಿ 25,000 ಕ್ಕೂ ಅಧಿಕ ಜನ ಮಾಲಾಧಾರಿಗಳು ಭಾಗವಹಿಸುವ ಸಾಧ್ಯತೆ ಇದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com