ರಾಜ್ಯದಲ್ಲಿ ಒಟ್ಟಾರೆ 35 JN1 ಪ್ರಕರಣ ಪತ್ತೆ; ಇಂದು 125 ಜನರಿಗೆ ಕೊರೋನಾ ಪಾಸಿಟಿವ್, ಮೂವರು ಸಾವು

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 125 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು ಮೂವರು ಸಾವನ್ನಪ್ಪಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 125 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು ಮೂವರು ಸಾವನ್ನಪ್ಪಿದ್ದಾರೆ.

ಕಳೆದ 24 ಗಂಟೆಗಳಲ್ಲಿ 125 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4,089,587 ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 436ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೊರೊನಾ ಪಾಸಿಟಿವಿ ರೇಟ್ ಶೇಕಡಾ 3.96ರಷ್ಟಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ತಿಳಿಸಿದೆ.

ಬೆಂಗಳೂರಿನಲ್ಲಿಯೇ ಬರೊಬ್ಬರಿ 94 ಜನರಿಗೆ ಕೋವಿಡ್ ಪಾಸಿಟಿವ್ ಬಂದಿದ್ದರೆ ದಕ್ಷಿಣ ಕನ್ನಡ-5, ಹಾಸನ-5, ಮೈಸೂರು-13, ಶಿವಮೊಗ್ಗ-2, ವಿಜಯಪುರ-2, ದಾವಣಗೆರೆ, ಚಿಕ್ಕಮಗಳೂರು, ಬಳ್ಳಾರಿ ಹಾಗೂ ಚಿಕ್ಕಬಳ್ಳಾಪುರದಲ್ಲಿ ತಲಾ ಒಬ್ಬರಲ್ಲಿ ವೈರಸ್​ ಪತ್ತೆಯಾಗಿದೆ.

ಕರ್ನಾಟಕಕ್ಕೂ ಓಮಿಕ್ರಾನ್ ಉಪತಳಿ JN.1 ವೈರಸ್ ಎಂಟ್ರಿ, 35 ಕೇಸ್ ಪತ್ತೆ

ಕೊರೊನಾ ರೂಪಾಂತರಿ JN.1 ವೈರಸ್ ಕರ್ನಾಟಕಕ್ಕೂ ಎಂಟ್ರಿ ಕೊಟ್ಟಿದ್ದು, 35 ಪ್ರಕರಣಗಳು ಪತ್ತೆಯಾಗಿವೆ. ಕೇವಲ ಕೇರಳದಲ್ಲಿ ಓಮಿಕ್ರಾನ್ ಉಪತಳಿ ಜೆಎನ್.1 ವೈರಸ್ ಪತ್ತೆಯಾಗಿತ್ತು. ಆದರೆ ಇದೀಗ ರಾಜ್ಯಕ್ಕೂ ಎಂಟ್ರಿ ಕೊಟ್ಟಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೊಸ ಕೋವಿಡ್‌ ಉಪ ತಳಿ ಜೆ.ಎನ್.1 ಪತ್ತೆಯಾಗಿದ್ದು, 35ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com