ಬೆಂಗಳೂರು: ಗರ್ವೆಭಾವಿ ಪಾಳ್ಯದಲ್ಲಿರುವ ತಮ್ಮ ನಿವಾಸದಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಎರಡೂವರೆ ವರ್ಷದ ಮಗು ಸೇರಿದಂತೆ ಇಬ್ಬರು ಸಾವಿಗೀಡಾಗಿದ್ದು, ಉಳಿದ ಮೂವರು ಕುಟುಂಬ ಸದಸ್ಯರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಡಿಸೆಂಬರ್ 19 ರಂದು ಈ ಘಟನೆ ನಡೆದಿದ್ದು, ಕುಟುಂಬದ ಸದಸ್ಯರಲ್ಲಿ ಒಬ್ಬರಾದ ನಿಖಿಲಾ (26) ಅವರು ಸೋಮವಾರ ರಾತ್ರಿ ಅಡುಗೆ ತಯಾರಿಸಿದ ನಂತರ ಗ್ಯಾಸ್ ರೆಗ್ಯುಲೇಟರ್ ಅನ್ನು ಸ್ವಿಚ್ ಆಫ್ ಮಾಡಲು ಮರೆತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಸಂತ್ರಸ್ತ ಸಂದೇಶ್ ಎಂಬುವವರು ಗ್ಯಾಸ್ ಹೊತ್ತಿಸಿದ ಪರಿಣಾಮ ಸಿಲಿಂಡರ್ ಸ್ಫೋಟಗೊಂಡಿದೆ.
ರೆಗ್ಯುಲೇಟರ್ ಅನ್ನು ಆನ್ ಮಾಡಿದ್ದರಿಂದ ಗ್ಯಾಸ್ ಸೋರಿಕೆಯಾಗಿ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಸಂದೇಶ್, ಅವರ ಮಗು ರೋಷನ್ ಮತ್ತು ಅವರ ಅತ್ತಿಗೆ ನಿಖಿಲಾ ಮತ್ತು ಇತರ ಇಬ್ಬರು ಮಕ್ಕಳಾದ ರೋಶಿನಿ ಮತ್ತು ರೋಹನ್‌ಗೆ ಗಂಭೀರ ಗಾಯಗಳಾಗಿದ್ದವು. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಇದನ್ನೂ ಓದಿ: ಬೆಂಗಳೂರು: ಎಲ್ಪಿಜಿ ಸಿಲಿಂಡರ್ ಸ್ಫೋಟ, ಐವರಿಗೆ ಗಾಯ
ನಂತರ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಭಾನುವಾರ ಬೆಳಗ್ಗೆ ಸಂದೇಶ್ ಮತ್ತು ರೋಷನ್ ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ಚಿಕಿತ್ಸೆ ಪಡೆಯುತ್ತಿರುವ ಕುಟುಂಬದ ಇತರೆ ಸದಸ್ಯರ ಸ್ಥಿತಿ ಚಿಂತಾಜನಕವಾಗಿದೆ. ಬೇಗೂರು ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement