ಬೆಂಗಳೂರಿನಲ್ಲಿ ಕಟ್ಟಡ ನಿರ್ಮಾಣ ಕಾರ್ಯವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು

ಕಟ್ಟಡ ನಿರ್ಮಾಣ ಕಾರ್ಯವೇಳೆ ಮಣ್ಣು ಕುಸಿದು ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮಣ್ಣು ಕುಸಿದು ಕಾರ್ಮಿಕ ಸಾವು
ಮಣ್ಣು ಕುಸಿದು ಕಾರ್ಮಿಕ ಸಾವು
Updated on

ಬೆಂಗಳೂರು: ಕಟ್ಟಡ ನಿರ್ಮಾಣ ಕಾರ್ಯವೇಳೆ ಮಣ್ಣು ಕುಸಿದು ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಗರದ ಸುದ್ದಗುಂಟೆಪಾಳ್ಯ(Suddaguntepalya)ದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೃತ ಕಾರ್ಮಿಕನನ್ನು ಬಿಹಾರದ ಸೋನ್ ಪುರ್ ನಿವಾಸಿ ರಂಜನ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮಣ್ಣಿನಲ್ಲಿ ಸಿಲುಕಿಕೊಂಡಿದ್ದ ಮತ್ತೋರ್ವ ಕಾರ್ಮಿಕನನ್ನು ರಕ್ಷಣೆ ಮಾಡಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಮೃತ ಕಾರ್ಮಿಕನ ದೇಹ ಹೊರ ತೆಗೆದಿದ್ದು, ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಈ ಕುರಿತು ಮಾತನಾಡಿದ ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ ಬಾಬ ಅವರು, ‘ಮಧ್ಯಾಹ್ನ 2.30ರ ಸುಮಾರಿಗೆ ಈ ಘಟನೆ ನಡೆದಿದೆ. ಅಪಾರ್ಟ್ಮೆಂಟ್ ನಿರ್ಮಾಣಕ್ಕಾಗಿ ಜೆಸಿಬಿ ಮೂಲಕ ಅಡಿಪಾಯ ಅಗೆಯಲಾಗುತ್ತಿತ್ತು. ಜೆಸಿಬಿ ಜೊತೆಗೆ ಮೂರ್ನಾಲ್ಕು ಜನ ಕಾರ್ಮಿಕರನ್ನು ಕೆಲಸಕ್ಕೆ ಬಳಸಿಕೊಳ್ಳಲಾಗಿತ್ತು. ಈ ವೇಳೆ ಪಕ್ಕದಲ್ಲಿ ಮೂರು ಅಂತಸ್ಥಿನ ಬಿಲ್ಡಿಂಗ್ ಕಟ್ಟಡಕ್ಕೆ ಜೆಸಿಬಿ ತಾಗಿದೆ. ಆ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರ ಮೇಲೆ ಬಿದ್ದಿದೆ. ಘಟನೆಯಲ್ಲಿ ಬಿಹಾರ ಮೂಲದ ಓರ್ವ ಸಾವನ್ನಪ್ಪಿದ್ದಾನೆ. ಈಗಾಗಲೇ ಮಾಲೀಕ ಯಾರು, ಕಾಂಟ್ರಾಕ್ಟರ್ ಯಾರು ಎನ್ನುವ ಮಾಹಿತಿ ಪಡೆಯಲಾಗುತ್ತಿದೆ. ಸಂಬಂಧಪಟ್ಟವರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತೆ. ಬಿಬಿಎಂಪಿಯಿಂದ ಮಾಲೀಕರು ಎನೆಲ್ಲಾ ಪರ್ಮಿಷನ್ ತಗೊಂಡಿದ್ದಾರೆ ಎನ್ನುವ ಮಾಹಿತಿ ಪಡೆಯಲಾಗುತ್ತಿದೆ ಎಂದರು.

ಈ ಸಂಬಂಧ ಸುದ್ದಗುಂಟೆಪಾಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com